/newsfirstlive-kannada/media/post_attachments/wp-content/uploads/2025/05/RCB-IPL-2025.jpg)
ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ-ಆಫ್ ಪವೇಶ ಮಾಡಿದೆ. ಆರ್ಸಿಬಿ ಜೊತೆಗೆ ಗುಜರಾತ್ ಟೈಟನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಕೂಡ ಪ್ಲೇ-ಆಫ್ಗೆ ಎಂಟ್ರಿ ನೀಡಿವೆ.
ಈ ಮೂರು ತಂಡಗಳು ಪ್ಲೇ-ಆಫ್ನಲ್ಲಿ ಆಡೋದು ಖಚಿತವಾಗಿದ್ದು, ಆದರೆ ತಂಡಗಳ ಸ್ಥಾನ ಇನ್ನೂ ನಿರ್ಧಾರವಾಗಿಲ್ಲ. ಇಂದು ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ 18 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ.
ಇದನ್ನೂ ಓದಿ: ಕಾಂತಾರ ಅವತಾರ ಬಳಿಕ KL ರಾಹುಲ್ ಮತ್ತೊಂದು ಹೊಸ ಅಧ್ಯಾಯ.. ಗುಜರಾತ್ ವಿರುದ್ಧ ಭರ್ಜರಿ ಶತಕ..!
ಇನ್ನು, ಮೊದಲ ಸ್ಥಾನದಲ್ಲಿದ್ದ ಆರ್ಸಿಬಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಅಂತೆಯೇ, ಇಂದು ನಡೆದ ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಸೋಲಿಸುವ ಮೂಲಕ ಮೂರನೇ ಸ್ಥಾನವನ್ನು ಅಲಂಕರಿಸಿದೆ. ಈ ಮೂರೂ ತಂಡಗಳಿಗೂ ತಲಾ ಎರಡೆರಡು ಪಂದ್ಯಗಳಿವೆ.
ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ಗೆ ನಾಯಕನ ಹೆಸರು ಫೈನಲ್.. ಅಧಿಕೃತ ಘೋಷಣೆ ಒಂದೇ ಬಾಕಿ..!
ಈ ಪಂದ್ಯಗಳಲ್ಲಿ ಸೋಲು, ಗೆಲುವಿನ ಆಧಾರದ ಮೇಲೆ ಪ್ಲೇ-ಆಫ್ನ ಸ್ಥಾನ ನಿರ್ಧಾರ ಆಗಲಿದೆ. ಸದ್ಯ ಗುಜರಾತ್ ಮತ್ತು ಆರ್ಸಿಬಿ ಮೊದಲ ಎರಡು ಸ್ಥಾನಗಳಲ್ಲಿವೆ ಇವೆ. 12 ಪಂದ್ಯ ಆಡಿರುವ ಗುಜರಾತ್ 9 ಮ್ಯಾಚ್ ಗೆದ್ದು 18 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. 12 ಪಂದ್ಯದಲ್ಲಿ 8 ಮ್ಯಾಚ್ ಗೆದ್ದಿರುವ ಆರ್ಸಿಬಿ 18 ಅಂಕದೊಂದಿಗೆ ನೆಟ್ ರನ್ ರೇಟ್ ಆಧಾರದ ಮೇಲೆ ಎರಡನೇ ಸ್ಥಾನದಲ್ಲಿದೆ. ಅದೇ ರೀತಿ ಪಂಜಾಬ್ ಕಿಂಗ್ಸ್ ಕೂಡ 8 ಪಂದ್ಯ ಗೆದ್ದು ಮೂರನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ ನಡೆಸಲಿವೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್