newsfirstkannada.com

ಸಿಎಂ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ- ರಾಜ್ಯ ಸರ್ಕಾರ ಮಹತ್ವದ ಆದೇಶ

Share :

02-09-2023

    ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಮಾರ್ಗಸೂಚಿ!

    ಯಾವುದೇ ವರ್ಗಾವಣೆಗೂ ಸಿಎಂ ಅನುಮೋದನೆ ಕಡ್ಡಾಯ

    ಯಾವುದೇ ಇಲಾಖೆಯಲ್ಲಿ ವರ್ಗಾವಣೆಗೆ ಸಿಎಂ ಅನುಮತಿ

ಬೆಂಗಳೂರು: ನನ್ನ ಅನುಮತಿ ಇಲ್ಲದೆ ಇನ್ಮುಂದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರ ಆದೇಶ ಹೊರಡಿಸಿರೋ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಯಾವುದೇ ಇಲಾಖೆಯೂ ಮುಖ್ಯಮಂತ್ರಿಗಳ ಅನುಮೋದನೆ ಇಲ್ಲದೆ ವರ್ಗಾವಣೆ ಮಾಡಬಾರದು. ಅದು ಅವಧಿಪೂರ್ವ ವರ್ಗಾವಣೆ ಆಗಿರಲಿ, ಸಾಮಾನ್ಯ ವರ್ಗಾವಣೆ ಆಗಿರಲಿ, ಯಾವುದೇ ಮಾಡುವಂತಿಲ್ಲ. ಸರ್ಕಾರಿ ನೌಕರರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ, ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾಯಿಸೋ ಮುನ್ನ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿಎಂ ಗಮನಕ್ಕೆ ತಂದು ಅನುಮೋದನೆ ಪಡೆಯಬೇಕು ಎಂದು ಬರೆದಿದ್ದಾರೆ.

ಇನ್ನು, ಒಂದು ವೇಳೆ ಸಿಎಂ ಗಮನಕ್ಕೆ ಬಾರದೆ ವರ್ಗಾವಣೆ ಆದಲ್ಲಿ ಅದಕ್ಕೆ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರೇ ಹೊಣೆಗಾರರಾಗಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಎಂ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ- ರಾಜ್ಯ ಸರ್ಕಾರ ಮಹತ್ವದ ಆದೇಶ

https://newsfirstlive.com/wp-content/uploads/2023/08/Siddaramaiah-1.jpg

Load More