ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್
‘ಮೋದಿ ಸರ್ನೇಮ್’ ಹೇಳಿಕೆ ಕೇಸ್ನಲ್ಲಿ 2 ವರ್ಷ ಜೈಲು ಶಿಕ್ಷೆ
2019ರ ಲೋಕಸಭೆ ಎಲೆಕ್ಷನ್ನಲ್ಲಿ ಮೋದಿ ವಿರುದ್ಧ ರಾಹುಲ್ ಹೇಳಿಕೆ
ಮೋದಿ ‘ಸರ್ ನೇಮ್’ (‘Modi surname) ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ಆಗಿದೆ. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ತೀರ್ಪನ್ನು ಗುಜರಾತ್ ಹೈಕೋರ್ಟ್ ಇವತ್ತು ಪ್ರಕಟಿಸಲಿದೆ. ಕೋರ್ಟ್ ತೀರ್ಪು ನಂತರ ರಾಹುಲ್ ಗಾಂಧಿ ಜೈಲು ಸೇರುತ್ತಾರಾ? ಅಥವಾ ರಿಲೀಫ್ ಸಿಗುತ್ತಾ ಅನ್ನೋದು ಗೊತ್ತಾಗಲಿದೆ.
ಕರ್ನಾಟಕದಲ್ಲಿ ನೀಡಿದ್ದ ಹೇಳಿಕೆ
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ, ಕರ್ನಾಟಕದ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದ್ದರು. ಎಲ್ಲಾ ಕಳ್ಳರ ಉಪನಾಮ ಮೋದಿ ಎಂದು ಹೇಗೆ ಬರುತ್ತದೆ ಅಂತಾ ಪ್ರಶ್ನೆ ಮಾಡಿದ್ದರು. ರಾಹುಲ್ ಗಾಂಧಿಯ ಈ ಹೇಳಿಕೆ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಾಗಿತ್ತು.
ವಿಚಾರಣೆ ನಡೆಸಿದ್ದ ಸೂರತ್‌ನ ಸಿಜೆಎಂ (Surat Chief Judicial Magistrate) ಕೋರ್ಟ್, ರಾಹುಲ್ ಗಾಂಧಿಗೆ ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿ, ದಂಡ ಕೂಡ ವಿಧಿಸಿತ್ತು. ಈ ತೀರ್ಪು ಬೆನ್ನಲ್ಲೇ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವೂ ರದ್ದಾಗಿದೆ.
ಸಿಜೆಎಂ ಕೋರ್ಟ್ನ ತೀರ್ಪನ್ನು ರಾಹುಲ್ ಗಾಂಧಿ, ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಕೋರ್ಟ್ ತೀರ್ಪನ್ನು ಪರಿಶೀಲಿಸಿ, ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಏಪ್ರಿಲ್ 25 ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಗುಜರಾತ್ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ