newsfirstkannada.com

ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಗುಜರಿ ಅಂಗಡಿ

Share :

Published February 10, 2024 at 9:51am

    ಗುಜುರಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲವೂ ಬೆಂಕಿಗಾಹುತಿ

    ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ

    4 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ

ಬೆಂಗಳೂರು: ಬೆಳಗಿನ ಜಾವ ಗುಜುರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿರುವ ಘಟನೆ ನಗರದ ನಾಯಂಡಹಳ್ಳಿ ಬಳಿಯ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಗಂಗೊಂಡನಹಳ್ಳಿಯಲ್ಲಿನ ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗ ಹೊತ್ತಿ ಉರಿದಿದೆ. ಇದರಿಂದಾಗಿ ದಟ್ಟ ಹೊಗೆ ಆರಿಸಿದ್ದರಿಂದ ಸುತ್ತಲಿನ ಜನರೆಲ್ಲ ಭಯಭೀತರಾಗಿದ್ದರು. ತಕ್ಷಣ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳ ಸಮೇತ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಗುಜುರಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲವೂ ಬೆಂಕಿಗೆ ಆಹುತಿಯಾಗಿವೆ. ಆದರೆ ಇಂತಹ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಗುಜರಿ ಅಂಗಡಿ

https://newsfirstlive.com/wp-content/uploads/2024/02/BNG_NAYANDAHALLI_FIRE.jpg

Load More