ವಿಡಿಯೋದಲ್ಲಿ ಕೇಳಿಬಂದಿದ್ದ ವಿವೇಕಾನಂದ ಇವರೇನಾ..?
71 ಇನ್ಸ್ಪೆಕ್ಟರ್ಸ್ ವರ್ಗಾವಣೆ ಬೆನ್ನಲ್ಲೇ HDK ಮತ್ತೆ ಸಿದ್ದುಗೆ ಪ್ರಶ್ನೆ
ಸಿಎಂ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದ HDK
ಬೆಂಗಳೂರು: ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿರೋ ವಿಡಿಯೋ ವೈರಲ್ ಆಗ್ತಿರುವ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ 71 ಇನ್ಸ್ಪೆಕ್ಟರ್ಗಳು ಹಾಗೂ 40 ಡಿವೈಎಸ್ಪಿಗಳ ವರ್ಗಾವಣೆ ಮಾಡಲಾಗಿದೆ.
ಇವರೇನಾ ಅವರು..?
ಅಧಿಕಾರಿಗಳ ವರ್ಗಾವಣೆ ಹಿಂದೆ ಡಾ.ಯತೀಂದ್ರ ಕೈವಾಡ ಇದೆ ಅಂತ ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಯತೀಂದ್ರ ವಿಡಿಯೋದಲ್ಲಿ ಸಂಭಾಷಣೆಯಲ್ಲಿ ವಿವೇಕಾನಂದ ಎಂಬ ಹೆಸರು ಪ್ರಸ್ತಾಪ ಮಾಡಿದ್ದರು. ಇದೀಗ ಈಗ ಅದೇ ವಿವೇಕಾನಂದ ಅನ್ನೋ ಹೆಸರಿನ ಇನ್ಸ್ಪೆಕ್ಟರ್ ಮೈಸೂರು ನಗರದ ವಿವಿಪುರಂ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ. ಯತೀಂದ್ರ ಮಾತನಾಡಿರೋ ವಿವೇಕಾನಂದ ಇವರೇನಾ, ಮಹದೇವ್ ಜೊತೆ 4-5 ಲೀಸ್ಟ್ ಅಂತ ಹೇಳಿದ್ದು ಇದೇ ವರ್ಗಾವಣೆಯ ಬಗ್ಗೆನಾ ಎಂಬ ಚರ್ಚೆ ಶುರುವಾಗಿದೆ.
ಸರಣಿ ಟ್ವೀಟ್ ಮೂಲಕ HDK ಆಕ್ರೋಶ
ಇದೇ ವಿಚಾರಕ್ಕೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ.. ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ.. ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು.
ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…
ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು. 1/6#ಕಾಸಿಗಾಗಿಹುದ್ದೆ #CashForPosting pic.twitter.com/Ss55GDJmr0— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2023
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..?
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!?
ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!!ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. 2/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2023
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್ ಇನ್ಸ್ಪೆಕ್ಟರ್ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್ ಇನಸ್ಪೆಕ್ಟರ್ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? 4/6

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ಅಂಡ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? 5/6

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ