ಬ್ಯಾಂಕ್‌ ಜನಾರ್ಧನ್‌ ನಿಧನಕ್ಕೆ ಕಂಬನಿ ಮಿಡಿದ ಕೇಂದ್ರ ಸಚಿವ HD ಕುಮಾರಸ್ವಾಮಿ.. ಏನಂದ್ರು?

author-image
Bheemappa
Updated On
ಬ್ಯಾಂಕ್‌ ಜನಾರ್ಧನ್‌ ನಿಧನಕ್ಕೆ ಕಂಬನಿ ಮಿಡಿದ ಕೇಂದ್ರ ಸಚಿವ HD ಕುಮಾರಸ್ವಾಮಿ.. ಏನಂದ್ರು?
Advertisment
  • ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿದ್ದ ಬ್ಯಾಂಕ್ ಜನಾರ್ಧನ್
  • ಬೆಂಗಳೂರಲ್ಲಿ ಜನಿಸಿ, ನಗರದಲ್ಲೇ ವಿದ್ಯಾಬ್ಯಾಸ ಮಾಡಿದ್ದರು
  • ಬ್ಯಾಂಕ್‌ ಜನಾರ್ಧನ್‌ ನಿಧನ ವಾರ್ತೆಯಿಂದ HDK ಬೇಸರ

ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಅಭಿನಯ ಮಾಡಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ ಅವರು (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಸಂಬಂಧ ಕೇಂದ್ರ ಸಚಿವರಾದ ಹೆಚ್​.ಡಿ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು, ಬ್ಯಾಂಕ್‌ ಜನಾರ್ಧನ್‌ ನಿಧನ ಹಿನ್ನೆಲೆಯಲ್ಲಿ ತಮ್ಮಅಧಿಕೃತ ಎಕ್ಸ್​ ಖಾತೆಯಲ್ಲಿ ಫೋಟೋ ಹಾಕಿ ಪೋಸ್ಟ್​ ಶೇರ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐದುನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅನೇಕ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿದ್ದ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ದುಃಖವಾಗಿದೆ ಎಂದಿದ್ದಾರೆ.

ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ತಾವು ನಿರ್ವಹಿಸುತ್ತಿದ್ದ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:‘ಅಣ್ಣ ತಮ್ಮಂದಿರ ಹಾಗೇ ನಾವು ಇದ್ವಿ’.. ಬ್ಯಾಂಕ್ ಜನಾರ್ಧನ್ ಸಾವಿನ ಬಗ್ಗೆ ಕಂಬನಿ ಮಿಡಿದ ನಟ ಟೆನ್ನಿಸ್ ಕೃಷ್ಣ

publive-image

ಬ್ಯಾಂಕ್ ಜನಾರ್ಧನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಫೋಟೋ ಜೊತೆ ಬರೆದು ಹೆಚ್​.ಡಿ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಅವರು 1991 ರಿಂದ ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾದರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಜೀ ಬೂಂಬಾ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ಜನಾರ್ಧನ್ ನಟಿಸಿದ್ದಾರೆ. ಹಿರಿತೆರೆ, ಕಿರುತೆರೆಯಲ್ಲೂ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ನಟಿಸಿದ್ದರು.


">April 14, 2025

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment