ಸೀತಾರಾಮ ಮುಕ್ತಾಯದ ಬೆನ್ನಲ್ಲೇ.. ನಟಿ ವೈಷ್ಣವಿ ಗೌಡ ಮನೆಯಲ್ಲಿ ಸಂಭ್ರಮ; ಏನದು?

author-image
Veena Gangani
Updated On
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಸ್ಟಾರ್ ನಟಿ.. ವೈಷ್ಣವಿ ಗೌಡ ಮದುವೆ ಯಾವಾಗ, ಎಲ್ಲಿ ಗೊತ್ತಾ?
Advertisment
  • ಕನ್ನಡ ಕಿರುತೆರೆ ನಟಿ ವೈಷ್ಣವಿ ಗೌಡ ಮನೆಯಲ್ಲಿ ಸಂಭ್ರಮ
  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ವೈಷ್ಣವಿ ಗೌಡ
  • ಸೀತಾರಾಮ ಸೀರಿಯಲ್​ನಲ್ಲಿ ಸೀತಾ ಪಾತ್ರದಲ್ಲಿ ಅಭಿನಯ

ಕನ್ನಡದ ಸ್ಟಾರ್​ ನಟಿ ವೈಷ್ಣವಿ ಗೌಡ ಸದ್ಯ ಖುಷಿಯಲ್ಲಿದ್ದಾರೆ. ಇಷ್ಟು ದಿನ ಸೀರಿಯಲ್​ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದ ನಟಿ ವೈಷ್ಣವಿ ಗೌಡ ಈಗ ವೈಯಕ್ತಿಕ ಜೀವನಕ್ಕೆ ಸಮಯ ಕೊಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಟಾಪ್​ 6ರಲ್ಲಿ ಯಾರ ಕೈಗೆ ಸೇರಲಿದೆ Sa Re Ga Ma Pa ಟ್ರೋಫಿ.. ವೀಕ್ಷಕರ ಚಿತ್ತ ಯಾರತ್ತ?

publive-image

ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಸಖತ್​ ಫೇಮಸ್​ ಆಗಿದ್ದರು ನಟಿ ವೈಷ್ಣವಿ ಗೌಡ. ತಮ್ಮ ಕ್ಯೂಟ್​ ನಟನೆ ಮೂಲಕವೇ ವೀಕ್ಷಕರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡರು. ಇದಾದ ಬಳಿಕ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸೀತಾ ರಾಮ ಸೀರಿಯಲ್​ನಲ್ಲಿ ಸೀತಾ ಪಾತ್ರದಲ್ಲಿ ನಟಿಸಿದ್ದರು.

publive-image

ಇದೀಗ ಸೀತಾರಾಮ ಸೀರಿಯಲ್​ ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಹೌದು, ನಟಿ ವೈಷ್ಣವಿ ಗೌಡ ಮನೆಯಲ್ಲಿ ಕುಟುಂಬಸ್ಥರು ಅರಶಿಣ ಶಾಸ್ತ್ರವನ್ನು ಮಾಡಿದ್ದಾರೆ.

publive-image

ಕೆಲವೇ ಕೆಲವು ಸಂಬಂಧಿಕರ ಸಮ್ಮುಖದಲ್ಲಿ ನಟಿ ವೈಷ್ಣವಿ ಗೌಡ ಮುಖಕ್ಕೆ ಅರಶಿಣ ಶಾಸ್ತ್ರ ಕಾರ್ಯಕ್ರಮವನ್ನು ಮಾಡಿದ್ದಾರೆ. ಸದ್ಯ ಇದೇ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

publive-image

ಇನ್ನೂ, ಕಳೆದ ತಿಂಗಳು ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಟಿ ವೈಷ್ಣವಿ ಗೌಡ ಉದ್ಯಮಿ ಅಕಾಯ್ ಜೊತೆಗೆ ಹಿರಿಯರ ಸಮ್ಮುಖದಲ್ಲಿ ಒಬ್ಬರೊಬ್ಬರು ಉಂಗುರ ಬದಲಾಯಿಸಿಕೊಂಡಿದ್ದರು. ಸದ್ಯದಲ್ಲೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ಸಜ್ಜಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment