/newsfirstlive-kannada/media/post_attachments/wp-content/uploads/2024/10/HAMPA-1.jpg)
ಮೈಸೂರು: ಕೆಡವುದು ಸುಲಭ, ಕಟ್ಟುವುದು ಕಷ್ಟ. ಸರ್ಕಾರಗಳನ್ನ ಉರುಳಿಸುವ ದುರಾಲೋಚನೆ ಬರದಂತೆ ತಡೆಯಬೇಕು ಎಂದು ಸಾಹಿತಿ, ದಸರಾ-2024 ಉದ್ಘಾಟಕ ಹಂಪ ನಾಗರಾಜಯ್ಯ ಹೇಳಿದ್ದಾರೆ.
ಇಂದಿನಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆರಂಭವಾಗಿದೆ. ದಸರಾ ಕಾರ್ಯಕ್ರಮಕ್ಕೆ ಸಾಹಿತಿ ಹಂಪ ನಾಗರಾಜಯ್ಯ ಪುಷ್ಪಾರರ್ಚನೆ ಸಲ್ಲಿಸೋ ಮೂಲಕ ದಸರಾ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು.. ಸರ್ಕಾರಗಳನ್ನ ಉರುಳಿಸುವ ದುರಾಲೋಚನೆ ಬರದಂತೆ ತಡೆಯಬೇಕು. ಚುನಾಯಿತ ಸರ್ಕಾರಗಳನ್ನ ಉಳಿಸುವ ಚಿಂತನೆ ಆಗಬೇಕು. ಲೋಕಾಂಬಿಕೆಯೂ ಅಂತಹ ಚಿಂತನೆ ಮೂಡಿಸಲಿ. ಸರ್ಕಾರ ಅಸ್ಥಿರತೆ ಮಾಡಬೇಡಿ ಎಂಬ ಕಿವಿಮಾತು ಹೇಳಿದರು.
ಇದನ್ನೂ ಓದಿ:ವಿಶ್ವವಿಖ್ಯಾತ ದಸರಾಗೆ ಸಂಭ್ರಮದ ಚಾಲನೆ.. ಕೆಂಪು ಸೀರೆ, ಹೂವುಗಳಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ
ಮೊದಲೇ ದೊಡ್ಡ ಹೊರೆಗಳಿಂದ ಶ್ರೀಸಾಮಾನ್ಯರು ಬಳಲಿ ಬಸವಳಿದಿದ್ದಾರೆ. ಪುನಃ ನಡೆಯುವ ಚುನಾವಣೆಗಳು ದೊಡ್ಡ ಹೊರೆಯಾಗಲಿವೆ. ಜನರಿಗೆ ಇನ್ನಷ್ಟು ಭಾರ ಹೇರಿದರೆ ಕುಸಿದುಬಿಡುತ್ತಾನೆ. ಯಾವ ಪಕ್ಷವೂ ಅಧಿಕಾರದಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಸೋತ ಪಕ್ಷವು ಮತ್ತೆ ಅಧಿಕಾರಕ್ಕೆ ಬರಬಹುದು.
ಇದನ್ನೂ ಓದಿ:ನವರಾತ್ರಿ ಉಪವಾಸ ಮತ್ತು ಗರ್ಭಿಣಿಯರು.. ಪಾಲಿಸಲೇಬೇಕಾದ ಸೂತ್ರಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ