ಇಂದು ಮೈಸೂರು ದಸರಾಗೆ ಅದ್ಧೂರಿ ಚಾಲನೆ.. ಸಾಹಿತಿ ಹಂಪ ನಾಗರಾಜಯ್ಯರಿಂದ ಉದ್ಘಾಟನೆ

author-image
Bheemappa
Updated On
ಇಂದು ಮೈಸೂರು ದಸರಾಗೆ ಅದ್ಧೂರಿ ಚಾಲನೆ.. ಸಾಹಿತಿ ಹಂಪ ನಾಗರಾಜಯ್ಯರಿಂದ ಉದ್ಘಾಟನೆ
Advertisment
  • ಚಾಮುಂಡಿ ಸನ್ನಿಧಿಯಲ್ಲಿ ದಸರಾ ಧಾರ್ಮಿಕ ಕಾರ್ಯಗಳು ಆರಂಭ
  • ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವರು ಭಾಗಿ
  • ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಟರ್ಚಾನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಇಂದು ನಾಡ ದೇವತೆ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ 2024ರ ದಸರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ. ಈ ಸಂಬಂಧ ಸಾಂಸ್ಕೃತಿಕ ನಗರಿಯಲ್ಲಿ ಸಡಗರ, ಸಂಭ್ರಮ ಏರ್ಪಟ್ಟಿದೆ.

ಇಂದಿನಿಂದ 9 ದಿನಗಳ ಕಾಲ ಮೈಸೂರು ನಗರ ಸ್ವರ್ಗದಂತೆ ಕಂಗೊಳಿಸುತ್ತದೆ. ಇದಕ್ಕೆ ಕಾರಣ ಇವತ್ತಿನಿಂದ ಆರಂಭವಾಗುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ. ಸಾಹಿತಿ ಹಂಪ ನಾಗರಾಜಯ್ಯ ಚಾಮುಂಡಿ ಸನ್ನಿಧಿಯಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈಗಾಗಲೇ ತಾಯಿ ಚಾಮುಂಡಿ ಉತ್ಸವ ಮೂರ್ತಿ ಶುದ್ಧೀಕರಣ ಮಾಡಲಾಗಿದ್ದು ಕೆಂಪು ಬಣ್ಣದ ಸೀರೆಯಲ್ಲಿ ತಾಯಿ ಕಂಗೋಳಿಸುತ್ತಿದ್ದಾಳೆ. ಬೆಳಿಗ್ಗೆ ತಾಯಿ ಚಾಮುಂಡೇಶ್ವರಿಗೆ ವಿವಿಧ ಅಭಿಷೇಕ ಮಾಡಿದ ಬಳಿಕ ವಿಶೇಷ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನ ಮಾಡಲಾಗುತ್ತೆ. ಈ ಮೂಲಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ದಸರಾದ ಧಾರ್ಮಿಕ ಕಾರ್ಯಗಳು ಆರಂಭವಾಗುತ್ತೆ.

ಇದನ್ನೂ ಓದಿ: ಮುಡಾ ಪ್ರಕರಣ; ಪಾರ್ವತಿ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ.. ಪತ್ನಿಗೆ CM ಏನಂದ್ರು?

publive-image

ಇನ್ನೊಂದೆಡೆ ಚಾಮುಂಡಿ ಬೆಟ್ಟದಲ್ಲಿ‌ ಸರ್ಕಾರದಿಂದ ಅಧಿಕೃತವಾಗಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈಗಾಗಲೇ ಚಾಮುಂಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಬೃಹತ್ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು 2 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇಂದು ನಡೆಯುವ ಕಾರ್ಯಕ್ರಮದಲ್ಲಿ ಉದ್ಘಾಟಕರಾದ ಸಾಹಿತಿ ಹಂಪ ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9.15 ರಿಂದ 9.45ರಲ್ಲಿ ಸಲ್ಲುವ ಶುಭ ಲಗ್ನದಲ್ಲಿ ಬೆಳ್ಳಿ‌ ರಥದಲ್ಲಿ ವಿರಾಜಮಾನಳಾಗೋ ನಾಡದೇವತೆ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಗೆ ಪುಷ್ಟರ್ಚಾನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ಸಿಗುತ್ತೆ.

ಇದನ್ನೂ ಓದಿ:ಹೈಕೋರ್ಟ್​​ನಲ್ಲಿ ಭಾರೀ ಹುದ್ದೆಗಳ ನೇಮಕಾತಿ.. 100 ಅಲ್ಲ, 200 ಅಲ್ಲ 3 ಸಾವಿರಕ್ಕೂ ಹೆಚ್ಚು ಉದ್ಯೋಗಗಳು

publive-image

ಚಾಮುಂಡಿ ತಾಯಿಗೆ ಸಾಹಿತಿ ಹಂಪ‌ ನಾಗರಾಜಯ್ಯ ಪುಷ್ಪಾರ್ಚನೆ ಮಾಡಿದ ಬಳಿಕ ದಸರಾಗೆ ಅಧಿಕೃತ ಚಾಲನೆ ಸಿಕ್ಕಂತೆ ಆಗುತ್ತೆ. ಬಳಿಕ ಚಲನಚಿತ್ರೋತ್ಸವ, ಆಹಾರ ಮೇಳ, ಫಲ ಪುಷ್ಪ ಪ್ರದರ್ಶನ, ದಸರಾ ಕುಸ್ತಿ, ದಸರಾ ಸಿಎಂ‌ ಕಪ್, ಪುಸ್ತಕ ಮೇಳ, ವಸ್ತು ಪ್ರದರ್ಶನ, ವಿದ್ಯುತ್ ದೀಪಾಲಂಕಾರಕ್ಕೆ‌ ಸಿಎಂ‌ ಹಾಗೂ ಸಂಬಂಧ ಪಟ್ಟ ಇಲಾಖೆಯ ಸಚಿವರು ಚಾಲನೆ ನೀಡಲಿದ್ದಾರೆ.

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲು ಕೆಲವೆ ಕ್ಷಣಗಳಷ್ಟೇ ಬಾಕಿ ಉಳಿದಿವೆ. ಇನ್ನೂ 9 ದಿನಗಳ‌ ಕಾಲ ಸಾಂಸ್ಕೃತಿಕ ನಗರಿಯ ದಸರಾ ರಾಜ್ಯವಲ್ಲದೇ ದೇಶ-ವಿದೇಶದ ಜನರನ್ನ ಸೆಳೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment