/newsfirstlive-kannada/media/post_attachments/wp-content/uploads/2024/05/Hardik-Pandya-Natasha.jpg)
ಟೀಮ್​ ಇಂಡಿಯಾದ ಸ್ಟಾರ್​ ಆಲ್​ರೌಂಡರ್​​​ ಹಾರ್ದಿಕ್​ ಪಾಂಡ್ಯ, ನಟಿ ನತಾಶಾ ಸ್ಟಾಂಕೋವಿಕ್ ಇಬ್ಬರು ಡಿವೋರ್ಸ್​ ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಹಾರ್ದಿಕ್​ ಪಾಂಡ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಹಾರ್ದಿಕ್​ ಪಾಂಡ್ಯ ಪೊಸ್ಟ್​ನಲ್ಲೇನಿದೆ?
ಈ ಸಂಬಂಧ ಅಧಿಕೃವಾಗಿ ಇನ್​ಸ್ಟಾದಲ್ಲಿ ಪೋಸ್ಟ್​ ಮಾಡಿ ಸ್ಪಷ್ಟನೆ ನೀಡಿರೋ ಸ್ಟಾರ್​ ಕ್ರಿಕೆಟರ್​ ಹಾರ್ದಿಕ್​ ಪಾಂಡ್ಯ, ನಾನು ನತಾಶಾ ಬೇರೆ ಆಗಿದ್ದೇವೆ. ಕಳೆದ 4 ವರ್ಷಗಳಿಂದ ಜೊತೆಯಲ್ಲೇ ಇದ್ದೆವು. ದಾಂಪತ್ಯ ಜೀವನದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆವು. ಕೊನೆಗೆ ಭಿನ್ನಾಭಿಪ್ರಾಯ ಮಿತಿಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿ ಬೇರೆ ಆಗುತ್ತಿದ್ದೇವೆ. ಇದು ಕಠಿಣ ನಿರ್ಧಾರ. ನಮ್ಮ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನಿಗೆ ನಾವಿಬ್ಬರು ಎಲ್ಲ ರೀತಿಯಲ್ಲೂ ಬೆಂಬಲವಾಗಿ ಇರುತ್ತೇವೆ ಎಂದಿದ್ದಾರೆ.
ಹಾರ್ದಿಕ್ ಪಾಂಡ್ಯ ಮತ್ತು ನತಾಶಾ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. ಉದಯಪುರದಲ್ಲಿ ತಮ್ಮ 3ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us