newsfirstkannada.com

ಟಿ20 ವಿಶ್ವಕಪ್​​ಗೆ ಮುನ್ನವೇ ಟೀಮ್​ ಇಂಡಿಯಾಗೆ ಬಂತು ಆನೆಬಲ; ಸ್ಟಾರ್​ ಪ್ಲೇಯರ್​ ಎಂಟ್ರಿ!

Share :

Published May 29, 2024 at 5:24pm

  2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​ ಮುಕ್ತಾಯ

  ಇದೇ ಜೂನ್ 2ರಿಂದ 2024ರ ಐಸಿಸಿ ವಿಶ್ವಕಪ್ ಪಂದ್ಯಾವಳಿ ಶುರು..!

  ಐಸಿಸಿ ಟ್ರೋಫಿ ಎತ್ತಿಹಿಡಿಯಲು ಎದುರು ನೋಡುತ್ತಿರೋ ಭಾರತ ತಂಡ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​ ಮುಕ್ತಾಯವಾಗಿದೆ. ಇದೇ ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ 2024ರ ಐಸಿಸಿ ವಿಶ್ವಕಪ್ ಪಂದ್ಯಾವಳಿ ಶುರುವಾಗಲಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಮ್​ ಇಂಡಿಯಾ 2013ರ ನಂತರ ಮೊದಲನೇ ಐಸಿಸಿ ಟ್ರೋಫಿ ಎತ್ತಿಹಿಡಿಯಲು ಎದುರು ನೋಡುತ್ತಿದೆ.

ಇನ್ನು, ಈಗಾಗಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟೂರ್ನಿಗಾಗಿ ಯುಎಸ್ಎ ತಲುಪಿದೆ. ಇದರ ಭಾಗವಾಗಿ ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಏಕೈಕ ಅಭ್ಯಾಸ ಪಂದ್ಯ ಆಡಲಿದೆ. ಇದರ ಮಧ್ಯೆ ಸ್ಟಾರ್​ ಆಲ್​ರೌಂಡರ್​​ ಹಾರ್ದಿಕ್​ ಪಾಂಡ್ಯ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾ ಸೇರಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರೋ ಸ್ಟಾರ್​​ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ತಮ್ಮ ಅಭ್ಯಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜತೆಗೆ ಆನ್​​ ನ್ಯಾಷನಲ್​ ಡ್ಯೂಟಿ ಎಂದು ಕ್ಯಾಪ್ಷನ್​ ಕೂಡ ಕೊಟ್ಟಿದ್ದಾರೆ.

ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಡಿವೋರ್ಸ್ ಸುದ್ದಿ ಬೆನ್ನಲ್ಲೇ ಮತ್ತೊಂದು ರಹಸ್ಯ ಫೋಟೋ ಶೇರ್ ಮಾಡಿದ ಪಾಂಡ್ಯ ಪತ್ನಿ.. ಟಾಂಟ್ ಕೊಟ್ರಾ..?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟಿ20 ವಿಶ್ವಕಪ್​​ಗೆ ಮುನ್ನವೇ ಟೀಮ್​ ಇಂಡಿಯಾಗೆ ಬಂತು ಆನೆಬಲ; ಸ್ಟಾರ್​ ಪ್ಲೇಯರ್​ ಎಂಟ್ರಿ!

https://newsfirstlive.com/wp-content/uploads/2024/05/Hardik-Pandya_IND.jpg

Load More