newsfirstkannada.com

ತಾಳ್ಮೆ ಕಳೆದುಕೊಂಡು ಕೂಗಾಡಿದ ಹಾರ್ದಿಕ್ ಪಾಂಡ್ಯ; ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು

Share :

Published April 27, 2024 at 9:14pm

Update April 27, 2024 at 10:48pm

    ಮುಂಬೈ ಇಂಡಿಯನ್ಸ್‌ಗೆ ಆರಂಭದಲ್ಲೇ ಕೈ ಕೊಟ್ಟ ರೋಹಿತ್ ಶರ್ಮಾ

    ಬ್ಯಾಟಿಂಗ್, ಬೌಲಿಂಗ್‌ ಎರಡರಲ್ಲೂ ವಿಫಲವಾದ ಮುಂಬೈ ಇಂಡಿಯನ್ಸ್‌

    ಫೀಲ್ಡಿಂಗ್ ಮಾಡುವಾಗ ತಾಳ್ಮೆ ಕಳೆದುಕೊಂಡ ಹಾರ್ದಿಕ್ ಪಾಂಡ್ಯ ಮಾಡಿದ್ದೇನು?

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಹಣಾಹಣಿಯಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 10 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಡೆಲ್ಲಿ ತಂಡ ಮುಂಬೈ ಆಟಗಾರರನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಸ್ಕೋರ್ ಕಲೆ ಹಾಕಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಹಾಗೂ ಅಭಿಷೇಕ್ ಪೊರೆಲ್ ಆರಂಭಿಕರಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇವರಿಬ್ಬರ ಜೊತೆಯಾಟದಿಂದ ಡೆಲ್ಲಿ ತಂಡ ಉತ್ತಮ ಆರಂಭ ಪಡೆಯಿತು.

ಮುಂಬೈ ಇಂಡಿಯನ್ಸ್ ಬೌಲರ್‌ಗಳನ್ನು ದಂಡಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್ 27 ಎಸೆತಗಳಲ್ಲಿ 11 ಬೌಂಡರಿ, 6 ಸಿಕ್ಸರ್‌ ಸಿಡಿಸಿ ಅಮೋಘ ಆಟ ಪ್ರದರ್ಶಿಸಿದರು. ಜೇಕ್ ಫ್ರೇಸರ್-ಮೆಕ್‌ಗುರ್ಕ್ ಔಟ್ ಆದ ಮೇಲೂ ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟ್ಸಮನ್‌ಗಳು ಉತ್ತಮ ಆಟ ಪ್ರದರ್ಶಿಸಿದರು. ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 257 ರನ್ ಕಲೆ ಹಾಕಿ ಮುಂಬೈ ಇಂಡಿಯನ್ಸ್‌ಗೆ 258 ರನ್‌ಗಳ ಬಿಗ್ ಟಾರ್ಗೆಟ್ ನೀಡಿತ್ತು.

ಇದನ್ನೂ ಓದಿ: ಧೋನಿ ಸಿಕ್ಸ್ ಹೊಡೆಯಲಿ ಅಂತಾ ಕೆಟ್ಟ ಬೌಲಿಂಗ್ -ಹಾರ್ದಿಕ್ ಪಾಂಡ್ಯ ಸುತ್ತ ಮತ್ತೊಂದು ವಿವಾದ

ಡೆಲ್ಲಿ ಟಾರ್ಗೆಟ್ ಎದುರಿಸಿದ ಮುಂಬೈ ಇಂಡಿಯನ್ಸ್‌ಗೆ ಆರಂಭದಲ್ಲೇ ರೋಹಿತ್ ಶರ್ಮಾ ಕೈ ಕೊಟ್ಟರು. ತಿಲಕ್ ವರ್ಮಾ ಅರ್ಧ ಶತಕದ ಕಾಣಿಕೆ ನೀಡಿದ್ರೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಕೂಡ 46 ರನ್ ಗಳಿಸಿದಾಗ ವಿಕೆಟ್ ಒಪ್ಪಿಸಿದರು. 9 ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ 247 ರನ್ ಗಳಿಸಿ 10 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ಮತ್ತೆ ಹಾರ್ದಿಕ್ ಪಾಂಡ್ಯ ಅವರು ತಾಳ್ಮೆ ಕಳೆದುಕೊಂಡು ಕೋಪ ವ್ಯಕ್ತಪಡಿಸಿದ್ದಾರೆ. ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಕಂಟ್ರೋಲ್ ಕಳೆದುಕೊಂಡವರಂತೆ ಆಕ್ರೋಶ ಹೊರ ಹಾಕಿದ್ದಾರೆ. ದೆಹಲಿ ಸ್ಟೇಡಿಯಂನಲ್ಲಿ ಹಾರ್ದಿಕ್ ಪಾಂಡ್ಯ ಕೊಟ್ಟ ಶಾಕಿಂಗ್ ರಿಯಾಕ್ಷನ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರಂತೂ ಹಾರ್ದಿಕ್ ಪಾಂಡ್ಯ ತಾಳ್ಮೆ ಕಳೆದುಕೊಂಡ ವಿಡಿಯೋ ಟ್ರೋಲ್ ಮಾಡುತ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್‌ನಲ್ಲಿ ವಿಫಲವಾದ ಮುಂಬೈ ಇಂಡಿಯನ್ಸ್‌ ಮತ್ತೊಂದು ಹೀನಾಯ ಸೋಲಿಗೆ ಗುರಿಯಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ತಾಳ್ಮೆ ಕಳೆದುಕೊಂಡು ಕೂಗಾಡಿದ ಹಾರ್ದಿಕ್ ಪಾಂಡ್ಯ; ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು

https://newsfirstlive.com/wp-content/uploads/2024/04/Hardhik-Pandya.jpg

Load More