/newsfirstlive-kannada/media/post_attachments/wp-content/uploads/2024/03/Hardik_124.jpg)
ಇತ್ತೀಚೆಗೆ ಗುಜರಾತ್​​ ಟೈಟನ್ಸ್​​ ವಿರುದ್ಧ ಹೀನಾಯ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್​​ ತಂಡ ಇಂದು ಸನ್​ರೈಸರ್ಸ್​​ ಹೈದರಾಬಾದ್​​ ವಿರುದ್ಧ ಕಣಕ್ಕಿಳಿಯುತ್ತಿದೆ. ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಈ​ ಹೈವೋಲ್ಟೇಜ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ.
ಇನ್ನು, ಟಾಸ್​​ ಗೆದ್ದ ಕ್ಯಾಪ್ಟನ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಸನ್​ರೈಸರ್ಸ್​ ಹೈದರಬಾದ್​ ಮೊದಲು ಬ್ಯಾಟಿಂಗ್​ ಮಾಡುತ್ತಿದೆ. ಈ ಪಂದ್ಯಕ್ಕೂ ಸ್ಟಾರ್​ ಆಟಗಾರ ಸೂರ್ಯಕುಮಾರ್​ ಯಾದವ್​​ ಲಭ್ಯರಿಲ್ಲ.
ಉಭಯ ತಂಡಗಳು ಹೀಗಿವೆ..!
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us