newsfirstkannada.com

ಟೀಮ್​ ಇಂಡಿಯಾ ಕ್ಯಾಪ್ಟನ್​ ಆಗಬೇಕಿದ್ದ ಹಾರ್ದಿಕ್​​ ಪಾಂಡ್ಯಗೆ ಬಿಗ್​ ಶಾಕ್​​.. ಅಸಲಿಗೆ ಆಗಿದ್ದೇನು?

Share :

Published July 3, 2024 at 5:23pm

    ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಗೆದ್ದ ಭಾರತ

    ಕ್ಯಾಪ್ಟನ್​ ರೋಹಿತ್​ ಶರ್ಮಾ ನೇತೃತ್ವದಲ್ಲಿ ಟೀಮ್​ ಇಂಡಿಯಾಗೆ ವಿಶ್ವಕಪ್​​!

    ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ ರೋಹಿತ್​ ಶರ್ಮಾ

ಇತ್ತೀಚೆಗೆ ವೆಸ್ಟ್​ ಇಂಡೀಸ್​​ನಲ್ಲಿ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​​ ಫೈನಲ್​​ನಲ್ಲಿ ಸೌತ್​ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಕ್ಯಾಪ್ಟನ್​ ರೋಹಿತ್​ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇನ್ನು, ರೋಹಿತ್​ ಶರ್ಮಾ ನಿವೃತ್ತಿ ಪಡೆದ ಕಾರಣ ಭಾರತ ಟಿ20 ಕ್ರಿಕೆಟ್​ ತಂಡದ ಮುಂದಿನ ಕ್ಯಾಪ್ಟನ್​ ಯಾರು ಅನ್ನೋ ಚರ್ಚೆ ಜೋರಾಗಿದೆ. ಹಾರ್ದಿಕ್​ ಪಾಂಡ್ಯ ಟೀಮ್​ ಇಂಡಿಯಾ ಟಿ20 ನಾಯಕತ್ವ ವಹಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ರಿಯಾಕ್ಟ್​ ಮಾಡಿದ್ದಾರೆ. ಸದ್ಯದಲ್ಲೇ ಸೆಲೆಕ್ಷನ್​ ಕಮಿಟಿ ಜೊತೆಗೆ ಚರ್ಚಿಸಿ ಈ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದಿದ್ದಾರೆ. ಈ ಮಧ್ಯೆ ಹಾರ್ದಿಕ್​ ಪಾಂಡ್ಯಗೆ ಬಿಗ್​ ಶಾಕ್​ ಕಾದಿದೆ.

ಈಗ ಭಾರತ ಟಿ20 ಕ್ರಿಕೆಟ್​ ತಂಡದ ಕ್ಯಾಪ್ಟನ್​ ರೇಸಲ್ಲಿ ಹಾರ್ದಿಕ್​ ಪಾಂಡ್ಯ ಜೊತೆಗೆ ರಿಷಭ್​ ಪಂತ್​ ಕೂಡ ಇದ್ದಾರೆ ಎಂದು ಹೇಳಲಾಗುತ್ತಿದೆ. ರಿಷಭ್​ ಪಂದ್ಯ ಟೀಮ್​ ಇಂಡಿಯಾದ ವಿಕೆಟ್​ ಕೀಪರ್​ ಬ್ಯಾಟರ್​​. ಇವರು ಟೀಮ್​ ಇಂಡಿಯಾ ಕ್ಯಾಪ್ಟನ್​ ಆದ್ರೆ ಒಳ್ಳೆಯದು ಎನ್ನುವ ಮಾತುಗಳು ಕೇಳಿ ಬಂದಿವೆ. ಐಪಿಎಲ್​ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮುನ್ನಡೆಸಿರೋ ಅನುಭವ ಪಂತ್​ಗೆ ಇದೆ. ಹಾಗಾಗಿ ಹಾರ್ದಿಕ್​ ಬದಲಿಗೆ ಪಂತ್​ಗೆ ಸೆಲೆಕ್ಷನ್​ ಕಮಿಟಿ ಮಣೆ ಹಾಕಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಭಾರತ ವಿಶ್ವಕಪ್​​ ಗೆಲ್ಲಲು ಕೊಹ್ಲಿ ಮಾತ್ರ ಕಾರಣವಲ್ಲ’- ಮತ್ತೆ ನಾಲಿಗೆ ಹರಿಬಿಟ್ಟ ಅಂಬಾಟಿ ರಾಯುಡು!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟೀಮ್​ ಇಂಡಿಯಾ ಕ್ಯಾಪ್ಟನ್​ ಆಗಬೇಕಿದ್ದ ಹಾರ್ದಿಕ್​​ ಪಾಂಡ್ಯಗೆ ಬಿಗ್​ ಶಾಕ್​​.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/06/Hardik_Rohit1.jpg

Load More