Advertisment

ಪುಟಾಣಿ ಮಗಳನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಹರ್ಷಿಕಾ ಪೂಣಚ್ಚ ದಂಪತಿ; ಕ್ಯೂಟ್​ ವಿಡಿಯೋ ಇಲ್ಲಿದೆ!

author-image
Veena Gangani
Updated On
ಪುಟಾಣಿ ಮಗಳನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಹರ್ಷಿಕಾ ಪೂಣಚ್ಚ ದಂಪತಿ; ಕ್ಯೂಟ್​ ವಿಡಿಯೋ ಇಲ್ಲಿದೆ!
Advertisment
  • ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಭಾರೀ ಸಂಭ್ರಮ
  • ಹರ್ಷಿಕಾಗೆ ಸರ್ಪ್ರೈಸ್ ಬೇಬಿ ಶವರ್ ಪಾರ್ಟಿ ಆಯೋಜಿಸಿದ್ದ ನಟ
  • ಆಗಸ್ಟ್ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್​ ಜೋಡಿ

ಸ್ಯಾಂಡಲ್​ವುಡ್​ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ನಟಿ ಹರ್ಷಿಕಾ ಪೂಣಚ್ಚ ದಂಪತಿ ತಮ್ಮ ಚೊಚ್ಚಲ ಮಗುವನ್ನು ನಿವಾಸಕ್ಕೆ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದೇ ಮುದ್ದಾದ ವಿಡಿಯೋವನ್ನು ನಟಿ ಹರ್ಷಿಕಾ ಪೂಣಚ್ಚ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Advertisment

ಇದನ್ನೂ ಓದಿ:ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡ ಪುಟ್ಟಕ್ಕನ ಮಕ್ಕಳು; ಫ್ಯಾನ್ಸ್​ಗಳಿಂದ ಸ್ನೇಹಾಗೆ ಪ್ರಶ್ನೆಗಳ ಸುರಿಮಳೆ

publive-image

ಈ ವಿಡಿಯೋದಲ್ಲಿ ನಟಿ ಹರ್ಷಿಕಾ ಪೂಣಚ್ಚ ದಂಪತಿ ಮುದ್ದಾದ ಮಗಳನ್ನು ತಮ್ಮ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಕುಟುಂಬಸ್ಥರು ಮುದ್ದಾದ ಮಗುವಿಗೆ ಆರತಿ ಎತ್ತಿ ದೃಷ್ಠಿ ತೆಗೆದಿದ್ದಾರೆ. ಇದೇ ವಿಡಿಯೋ ನೋಡಿದ ಫ್ಯಾನ್ಸ್​ ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು, ಈ ಹಿಂದೆ ಸ್ಯಾಂಡಲ್‌ವುಡ್ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ 8 ತಿಂಗಳು ತುಂಬು ಗರ್ಭಿಣಿಯಾಗಿದ್ದ ಹರ್ಷಿಕಾಗೆ ಸರ್ಪ್ರೈಸ್ ಬೇಬಿ ಶವರ್ ಪಾರ್ಟಿಯನ್ನು ಮನೆಯಲ್ಲಿ ಆಯೋಜಿಸಿದ್ದರು.

publive-image

ಆ ಬೇಬಿ ಶವರ್ ಪಾರ್ಟಿಯಲ್ಲಿ ಸ್ಯಾಂಡಲ್​ವುಡ್​ ನಟ ನಟಿಯರು ಭಾಗಿಯಾಗಿದ್ದರು. ಕನ್ನಡದ ಹಿರಿಯ ನಟಿ ಮಾಲಾಶ್ರೀ, ಶೃತಿ, ಅನುಪ್ರಭಾಕರ್ ದಂಪತಿ, ಅಮೂಲ್ಯ ಜಗದೀಶ್ ದಂಪತಿ, ಪ್ರಿಯಾಂಕಾ ಉಪೇಂದ್ರ, ಆರಾಧನಾ ರಾಮ್, ಶೃತಿ ಮಗಳು ಗೌರಿ, ಶರಣ್ಯ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಳೆದ ವರ್ಷ 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Advertisment

publive-image

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರಾಗಿದ್ದರು. ಆ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ಮದುವೆಗೆ ಸ್ಯಾಂಡಲ್​ನ ಅನೇಕ ಗಣ್ಯರು ಕೂಡ ಸಾಕ್ಷಿಯಾಗಿದ್ರು. ಸದ್ಯ ಭುವನ್ ನಟನೆಯ ಹೊಸ ಚಿತ್ರಕ್ಕೆ ಪತ್ನಿ ಹರ್ಷಿಕಾ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಪತಿ ಸಿನಿಮಾವನ್ನು ನಟಿಯೇ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಜೊತೆಗೆ ಈ ಸ್ಟಾರ್ ದಂಪತಿ ಮುದ್ದಾದ ಮಗಳನ್ನು ತಮ್ಮ ನಿವಾಸಕ್ಕೆ ಬರಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment