ನ. 1ರಿಂದ ಟೀಮ್ ಇಂಡಿಯಾ, ನ್ಯೂಜಿಲೆಂಡ್ ಮಧ್ಯೆ 3ನೇ ಟೆಸ್ಟ್
ಮೂರನೇ ಟೆಸ್ಟ್ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡಕ್ಕೆ ಹಾರ್ಸ್ ಪವರ್
ನ್ಯೂಜಿಲೆಂಡ್ ವಿರುದ್ಧ 3ನೇ ಟೆಸ್ಟ್ಗೆ ಸ್ಫೋಟಕ ಆಟಗಾರನ ಎಂಟ್ರಿ
ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಅನಿವಾರ್ಯ ಆಗಿರೋ ಕಾರಣ ಎಲ್ಲರ ಚಿತ್ತ ಪಂದ್ಯದತ್ತ ನೆಟ್ಟಿದೆ. ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸೋಲಿನಿಂದ ಬಚಾವ್ ಆಗಲು ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಇದರ ಭಾಗವಾಗಿ ಟೀಮ್ ಇಂಡಿಯಾಗೆ ಸ್ಫೋಟಕ ಆಟಗಾರನ ಎಂಟ್ರಿಯಾಗಿದೆ.
3ನೇ ಟೆಸ್ಟ್ ಪಂದ್ಯಕ್ಕೆ ಹರ್ಷಿತ್ ರಾಣಾ ಎಂಟ್ರಿ
ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಕೊನೆಯ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾಗೆ ಎಂಟ್ರಿ ನೀಡಿರೋ ಸ್ಫೋಟಕ ಬೌಲರ್ ಯಾರು ಅಲ್ಲ, ಹರ್ಷಿತ್ ರಾಣಾ. ಇವರು ಈಗಾಗಲೇ ನೆಟ್ ಬೌಲರ್ ಆಗಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಇತ್ತೀಚೆಗೆ ರಣಜಿ ಡಿ ಗುಂಪಿನ ಪಂದ್ಯದಲ್ಲಿ ಮನಮೋಹಕ ಪ್ರದರ್ಶನ ನೀಡಿದ ಈ ಪ್ಲೇಯರ್ ಈಗ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ರಣಜಿಯಲ್ಲಿ ಮಿಂಚಿದ್ದ ಹರ್ಷಿತ್ ರಾಣಾ
ಇತ್ತೀಚೆಗೆ ನಡೆದ ರಣಜಿ ಟೂರ್ನಿಯ ಪಂದ್ಯದಲ್ಲಿ ಅಸ್ಸಾಂ ವಿರುದ್ಧ ಹರ್ಷಿತ್ ರಾಣಾ ಅಮೋಘ ಪ್ರದರ್ಶನ ನೀಡಿದ್ರು. ಮೊದಲನೇ ಇನ್ನಿಂಗ್ಸ್ನಲ್ಲಿ 80 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ರಾಣಾ ಬ್ಯಾಟ್ನಿಂದಲೂ ಕೊಡುಗೆ ನೀಡಿದ್ರು. 78 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿ ಔಟ್ ಆದರು. 2ನೇ ಇನಿಂಗ್ಸ್‌ನಲ್ಲೂ ಹರ್ಷಿತ್ ರಾಣಾ 61 ರನ್ ನೀಡಿ 2 ವಿಕೆಟ್ ಪಡೆದಿದ್ರು. ಹೀಗಾಗಿ ಇವರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ.
ಸರಣಿ ಸೋತ ಭಾರತ ತಂಡ
ಟೀಮ್ ಇಂಡಿಯಾ, ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿತು. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಫಸ್ಟ್ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 259 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ತಂಡ ಕೇವಲ 156 ರನ್ಗಳಿಗೆ ಆಲೌಟ್ ಆಗುವ ಮೂಲಕ 103 ರನ್ ಗಳ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ 255 ರನ್ ಕಲೆ ಹಾಕಿ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 359 ರನ್ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ 245 ರನ್ಗಳಿಗೆ ಆಲೌಟ್ ಆಗುವ ಮೂಲಕ 113 ರನ್ ಗಳಿಂದ ಪಂದ್ಯ ಸೋತಿದೆ.
ನವೆಂಬರ್ 1ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 5ರ ವರೆಗೆ ನಡೆಯಲಿದೆ. ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲು ಈ ಪಂದ್ಯ ಗೆಲ್ಲಲೇಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ