ವಿನೇಶ್ ಫೋಗಟ್ ನಮ್ಮ ಹೆಮ್ಮೆ; ಹರಿಯಾಣ ಸರ್ಕಾರದಿಂದ ದೊಡ್ಡ ಘೋಷಣೆ

author-image
Ganesh
Updated On
Good News: ಅನರ್ಹರಾದ ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ ಸಿಗುತ್ತಾ? ಮನವಿ ಒಪ್ಪಿಕೊಂಡ ಕೋರ್ಟ್!
Advertisment
  • ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್ ಅನರ್ಹ
  • ದೇಹದಲ್ಲಿ 100 ಗ್ರಾಮ ತೂಕ ಹೆಚ್ಚಾಗಿದ್ದಕ್ಕೆ ಅನರ್ಹ
  • ಪದಕದ ಆಸೆಯಲ್ಲಿದ್ದ ಭಾರತಕ್ಕೆ ಭಾರೀ ನಿರಾಸೆ ಆಗಿದೆ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ದೊಡ್ಡ ಆಘಾತ ಅನುಭವಿಸಿದ್ದಾರೆ. ವಿನೇಶ್ ಫೋಗಟ್ ಫೈನಲ್ ತಲುಪಿದ್ದರೂ, ಪದಕ ಗೆಲ್ಲಲು ಸಾಧ್ಯವಾಗಲಿಲ್ಲ. ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿಯಲ್ಲಿ ಭಾಗವಹಿಸಿ ಫೋಗಟ್ ಫೈನಲ್ ಪ್ರವೇಶ ಮಾಡಿದ್ದರು. ಫೈನಲ್​​​ ಪಂದ್ಯ ಆರಂಭಕ್ಕೂ ಮುನ್ನ ಅವರ ದೇಹದ ತೂಕ 100 ಗ್ರಾಂ ಹೆಚ್ಚಾಗಿದ್ದಕ್ಕೆ ಅನರ್ಹ ಗೊಳಿಸಲಾಗಿದೆ.

ಈ ನಿರ್ಧಾರದಿಂದ ಆಶ್ಚರ್ಯಗೊಂಡ ವಿನೇಶ್ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ವಿನೇಶ್ ಫೋಗಟ್ ನಿವೃತ್ತಿ ಎಲ್ಲರಿಗೂ ಆಶ್ಚರ್ಯವಾಗಿದೆ. ಈ ನಡುವೆ ಹರಿಯಾಣದ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ದೊಡ್ಡ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ವಿನೇಶ್ ಫೋಗಟ್ ಅನರ್ಹ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮಾಡಿದ ಕಂಗನಾ ರಣಾವತ್

ವಿನೇಶ್ ಫೋಗಟ್ ಫೈನಲ್ ಆಡಲು ಸಾಧ್ಯವಾಗದಿದ್ದರೂ, ಬೆಳ್ಳಿ ಪದಕ ವಿಜೇತರಿಗೆ ನೀಡುವ ಬಹುಮಾನ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಅವರು, ಒಲಿಂಪಿಕ್ಸ್‌ನ ಫೈನಲ್‌ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು. ಆದರೆ ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ವಿನೇಶ್ ಫೋಗಟ್ ಅವರನ್ನು ಪದಕ ವಿಜೇತರಂತೆ ಸ್ವಾಗತಿಸಲು, ಗೌರವಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಒಲಿಂಪಿಕ್ಸ್​ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ಫೋಗಟ್​ಗೆ ನೀಡಲಾಗುವುದು. ವಿನೇಶ್ ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದಿದ್ದಾರೆ.

ಇದನ್ನೂ ಓದಿ:ವಿನೇಶ್ ಫೋಗಟ್ ವಿವಾದಕ್ಕೆ ಹೊಸ ಟ್ವಿಸ್ಟ್; ನಿವೃತ್ತಿ ಘೋಷಣೆ ನಂತರವೂ ಪದಕದ ಭರವಸೆ ಮತ್ತೆ ಚಿಗುರಿದೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment