ದೇವಿಯನ್ನು ಕಣ್ತುಂಬಿಕೊಳ್ಳಲು ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಶಾಕ್
ದೇವಾಲಯದ ವೈರ್ ತುಂಡಾಗಿದ್ದರಿಂದ ಕರೆಂಟೆ ಶಾಕ್ ತಗುಲಿದೆಯಾ?
ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದ ಸಚಿವ
ಹಾಸನ: ಶಕ್ತಿ ದೇವತೆ ಹಾಸನಾಂಬೆ ದೇವಾಲಯದಲ್ಲಿ ಕರೆಂಟ್ ಶಾಕ್ನಿಂದ ಸರತಿ ಸಾಲಿನಲ್ಲಿ ಧಿಡೀರ್ ನೂಕು ನುಗ್ಗಲಾಗಿದ್ದು ಮಹಿಳೆಯರು, ಮಕ್ಕಳು ಓಡಲೆತ್ತಿಸಿದಾಗ ಕಾಲು ತುಳಿತ ಉಂಟಾಗಿ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗಳನ್ನು ಜಿಲ್ಲೆಯ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ಸ್ವರೂಪ್ ಪ್ರಕಾಶ್, ಕೆ.ಎಂ ಶಿವಲಿಂಗೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಹಾಸನಾಂಭೆ ಸನ್ನಿಧಿಯಲ್ಲಿ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್ ತಗುಲಿದ್ದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಕಾಲ್ತುಳಿತ ಉಂಟಾಗಿದೆ. ಇದರಿಂದ ಸಾಕಷ್ಟು ಜನರಿಗೆ ಸಣ್ಣ-ಪುಟ್ಟ ಗಾಯಗಳು ಆಗಿವೆ. ಗಾಯಾಳುಗಳನ್ನು ಜಿಲ್ಲೆಯ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಾಲಯದಲ್ಲಿ ಕರೆಂಟ್ ಶಾಕ್ನ ಮಾಹಿತಿ ತಿಳಿಯುದ್ದಂತೆ ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ವೈದ್ಯರಿಂದ ಗಾಯಾಳುಗಳ ಮಾಹಿತಿಯನ್ನು ಪಡೆದಿದ್ದು, ಈ ವೇಳೆ ಗಾಯಾಳುಗಳನ್ನು ಮಾತನಾಡಿಸಿದ್ದಾರೆ.
ಇನ್ನು ದೇವಾಲಯಕ್ಕೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಈ ಲೈಟಿಂಗ್ ವ್ಯವಸ್ಥೆಯ ವೈರ್ವೊಂದು ತುಂಡಾದ ಕಾರಣ ವಿದ್ಯುತ್ ಪ್ರವಾಹಿಸಿದೆ ಎಂದು ಹೇಳಲಾಗುತ್ತಿದೆ. ಮಳೆ ಬೀಳುತ್ತಿದ್ದರೂ ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ. ಆಡಳಿತ ಮಂಡಳಿಯ ನಿರ್ಲಕ್ಷ್ಯತನದಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ ನಿಖರ ಕಾರಣ ಯಾವುದು ಎಂದು ಇನ್ನು ಖಚಿತವಾಗಿ ತಿಳಿದು ಬಂದಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ