ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ
ನವೆಂಬರ್ 15 ರಂದು ಮುಚ್ಚಲಿರುವ ಹಾಸನಾಂಬೆ ದೇವಿಯ ಗರ್ಭಗುಡಿ
ಕರೆಂಟ್ ಶಾಕ್ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಂಡ ಜಿಲ್ಲಾಡಳಿತ
ಹಾಸನ: ಆ ತಾಯಿಯ ದರ್ಶನ ವರುಷಕ್ಕೊಮ್ಮೆ ಮಾತ್ರ. ಒಮ್ಮೆ ಹಚ್ಚಿಟ್ಟ ಮಹಾದೀಪ ವರ್ಷಪೂರ್ತಿಯೂ ಉರಿಯುತ್ತದೆ. ಮುಡಿಸಿದ ಹೂಗಳು ಬಾಡಲ್ಲ. ಇಂತಹ ಪವಾಡಗಳನ್ನು ಸೃಷ್ಟಿಸಿ ಬೇಡಿದ ವರವನ್ನ ನೀಡುವ ಹಾಸನಾಂಬೆಯ ದರ್ಶನ ಪಡೆಯಲು ಭಕ್ತರು ನಾ ಮುಂದು ತಾ ಮುಂದು ಎಂದು ಸಾಲು ಸಾಲಾಗಿ ಹರಿದು ಬರುತ್ತಿದ್ದಾರೆ. ಮೊದಲನೇ ಮತ್ತು ಕಡೆಯ ಅಂದ್ರೆ ನವೆಂಬರ್ 2 ರಂದು ನಂತರ 15ಕ್ಕೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ ಒಟ್ಟು 12 ದಿನಗಳ ಕಾಲ ಈ ಬಾರಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡುತ್ತಿದೆ.
ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನಕ್ಕೆ ಇನ್ನು 4 ದಿನ ಬಾಕಿ ಉಳಿದಿವೆ. ಹೀಗಾಗಿ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಹರಿದು ಬರುತ್ತಿದ್ದಾರೆ. ಸಾವಿರಾರು ಭಕ್ತರು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯುತ್ತಿದ್ದಾರೆ. ಇನ್ನು, ಹಾಸನಾಂಬೆ ದೇವಾಲಯದಲ್ಲಿ ಕರೆಂಟ್ ಶಾಕ್ ವದಂತಿಯಿಂದ ನಿನ್ನೆ ದಿಢೀರ್ ನೂಕು ನುಗ್ಗಲಾಗಿದೆ. ಈ ವೇಳೆ ಧರ್ಮ ದರ್ಶನ ಸರತಿ ಸಾಲಿನ ಬಳಿ ನಿಂತಿದ್ದ ಮಹಿಳೆಯರು ಎದ್ದು ಬಿದ್ದು ಓಡಲು ಯತ್ನಿಸಿದ್ದರು. ಓಡುವ ಬರದಲ್ಲಿ ಒಬ್ಬರ ಮೇಲೊಬ್ಬರು ಬಿದ್ದಿದ್ದರು. ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.
ಇದೇ ವಿಚಾರವಾಗಿ ದೇವಾಲಯದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮೊಕ್ಕಾಂ ಹೂಡಿದ್ದಾರೆ. ದೇವಿಯ ದರ್ಶನಕ್ಕೆಂದು ಬಂದ ಭಕ್ತರನ್ನು ನಿಯಂತ್ರಿಸಲು ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ನಿನ್ನೆ ಗೊಂದಲ ಉಂಟಾಗಿದೆ. ಎಲ್ಲವನ್ನೂ ಸರಿಪಡಿಸಿದ್ದೇವೆ. ಯಾರೂ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಹಾಸನಾಂಬೆ ತಾಯಿ ಎಲ್ಲವನ್ನೂ ನೋಡುತ್ತಿದ್ದಾಳೆ. ಯಾರಿಗೂ ಗೊಂದಲ ಆಗದಂತೆ ವ್ಯವಸ್ಥೆ ಮಾಡಿದ್ದೇವೆ. ಎಲ್ಲರೂ ಸಮಾಧಾನದಿಂದ ದೇವಿ ದರ್ಶನ ಪಡೆಯಿರಿ ಎಂದು ಸೂಚನೆ ನೀಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ