/newsfirstlive-kannada/media/post_attachments/wp-content/uploads/2024/05/Accident-12.jpg)
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಪರಿಣಾಮ ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ.
ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು, ಒಂದು ಮಗು ಸೇರಿದಂತೆ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ. ಪೊಲೀಸರು ನಜ್ಜುಗುಜ್ಜಾದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2024/05/Hassan-1.jpg)
ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ
ಕಾರಿನಲ್ಲಿದ್ದ ಮೃತರು ಚಿಕ್ಕಬಳ್ಳಾಪುರ ಮೂಲದವರು ಎಂದು ಗುರುತಿಸಲಾಗಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us