/newsfirstlive-kannada/media/post_attachments/wp-content/uploads/2024/11/kantara.jpg)
ಕಾಂತಾರ-2 ಚಿತ್ರತಂಡದ ಮೇಲೆ ದೊಡ್ಡ ಆರೋಪವೊಂದ ಸದ್ಯ ಕೇಳಿ ಬಂದಿದೆ ಚಿತ್ರೀಕರಣದ ನೆಪದಲ್ಲಿ ಅರಣ್ಯಕ್ಕೆ ಹಾನಿಯುಂಟು ಮಾಡಿದ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಪ ಕೇಳಿ ಬಂದಿದೆ. ಹೆರೂರು ಗ್ರಾಮದ ಬಳಿ ಘಟನೆ ನಡೆದಿದೆ ಎನ್ನಲಾಗಿದೆ.
ಕೆಲ ದಿನಗಳಿಂದ ನಡೆಯುತ್ತಿರುವ ಕಾಂತಾರ-2 ಸಿನಿಮಾದ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕಾಗಿ ಪರವಾನಿಗೆ ಪಡೆದುಕೊಂಡಿರುವ ಅರಣ್ಯ ಜಾಗದಲ್ಲಿ ಮರಗಳನ್ನು ಕಡಿದು, ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದರ್ಶನ್ ಪತ್ರಕ್ಕೆ ಡೋಂಟ್ ಕೇರ್ ಎಂದ ಪೊಲೀಸರು.. ದಾಸನಿಗೆ ಮತ್ತೊಂದು ಸಂಕಷ್ಟ..!
ಸಿನಿಮಾ ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬುವುದರ ಬಗ್ಗೆ ಅರಣ್ಯ ಹಾಗೂ ಕಂದಾಯ ಇಲಾಖೆ ಬಹಿರಂಗಪಡಿಸಬೇಕು. ಅರಣ್ಯದೊಳಗೆ ಬೆಂಕಿ ಹಾಕುತ್ತಿರುವುದರಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು. ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ