ಹಾಸನದಿಂದ ಮೈಸೂರಿಗೆ ತೆರಳುತ್ತಿರುವ ವೇಳೆ ನಡೆದ ಘಟನೆ
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು
ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹಾಸನ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ಹೊಳೆನರಸೀಪುರ ತಾಲ್ಲೂಕಿನ ಯಡೆಗೋಡನಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ.
ಐವರು ಇನೋವಾ ಕಾರಿನಲ್ಲಿ ಹಾಸನದಿಂದ ಮೈಸೂರಿಗೆ ತೆರಳುತ್ತಿದ್ದರುವ ವೇಳೆ ಯಡೆಗೋಡನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದ್ದು, ರತೀಪ್ (29) ಎಂಬಾತನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಿಲಾಗಿತ್ತದರು ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ.
ಇನ್ನು ನಾಲ್ವರು ಗಾಯಾಳುಗಳಿಗೆ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ