newsfirstkannada.com

BREAKING: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು; HDK ಹೇಳಿದ್ದೇನು?

Share :

Published April 30, 2024 at 12:38pm

Update April 30, 2024 at 12:53pm

    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ ಪಕ್ಷದಿಂದ ಅಮಾನತು

    ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ

    ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನ್ ನಾಯಕನ ಕೈವಾಡ ಎಂದ ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಪಕ್ಷದ ಕೋರ್‌ ಕಮಿಟಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್‌ ನಾಯಕರು ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ಯಾರು? ಸ್ಫೋಟಕ ಟ್ವಿಸ್ಟ್ ಕೊಟ್ಟ ಚಾಲಕ ಕಾರ್ತಿಕ್‌; ಬಿಜೆಪಿ ನಾಯಕ ಹೇಳಿದ್ದೇನು?

ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮದ ಬಗ್ಗೆ ಚರ್ಚೆಯಾಗಿದೆ. ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಶಾಸಕರು, ಮುಖಂಡ ಒತ್ತಾಯ ಮಾಡಿದ್ದರು. ಹೀಗಾಗಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಬಂಡೆಪ್ಪ ಕಾಶಂಪುರ, ಸಾರಾ ಮಹೇಶ್, ದೊಡ್ಡಪ್ಪಗೌಡ ಪಾಟೀಲ್​ ಸೇರಿ ಹಲವರು ಭಾಗಿಯಾಗಿದ್ದಾರೆ.

ಕೋರ್‌ ಕಮಿಟಿ ಸಭೆಯಲ್ಲಿ ಮಾತನಾಡಿದ ಹೆಚ್‌.ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ಪೆನ್ ಡ್ರೈವ್ ಹಂಚಿಕೆಯ ಹಿಂದೆ ಮಹಾನ್ ನಾಯಕನ ಕೈವಾಡ ಇದೆ. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜಾಗಿದೆ. ಪಕ್ಷದ ಇಮೇಜ್‌ಗೆ ಧಕ್ಕೆಯಾಗಬಾರದೆಂಬ ಕಾಳಜಿ ಇದೆ. ಇಲ್ಲಿ ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು; HDK ಹೇಳಿದ್ದೇನು?

https://newsfirstlive.com/wp-content/uploads/2024/04/Hassan-JDS-Meeting.jpg

Load More