newsfirstkannada.com

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟಗಳು ಎದುರಾಗೋದು ಪಕ್ಕಾ.. ಯಾಕಂದರೆ..!

Share :

Published May 8, 2024 at 7:57am

    ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ತೀವ್ರಗೊಂಡಿದೆ

    ಏಪ್ರಿಲ್ 30ರಂದು ಪ್ರಜ್ವಲ್​ಗೆ ನೋಟಿಸ್ ಕೊಟ್ಟಿದ್ದ ಎಸ್​ಐಟಿ

    ಇವತ್ತು ವಿಚಾರಣೆಗೆ ಹಾಜರಾಗುತ್ತಾರಾ ಪ್ರಜ್ವಲ್ ರೇವಣ್ಣ..?

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಗೆ ಇಂದು ಪ್ರಜ್ವಲ್ ರೇವಣ್ಣ ಹಾಜರಾಗುತ್ತಾರಾ? ಎಂಬ ಪ್ರಶ್ನೆ ಶುರುವಾಗಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ವಿಚಾರಣೆಗೆ ಹಾಜರಾಗಲು ಏಪ್ರಿಲ್ 30ರಂದು ಪ್ರಜ್ವಲ್​ಗೆ ಎಸ್​ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಮೇ 1 ರಂದು ತಮ್ಮ ವಕೀಲ ಅರುಣ್ ಜಿ ಮೂಲಕ 7 ದಿನ ಕಾಲಾವಕಾಶ ಕೇಳಿದ್ದರು. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಫೇಸ್​ಬುಕ್​​ನಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:ಕೊರೊನಾ ವ್ಯಾಕ್ಸಿನ್ ಹಿಂತೆಗೆದುಕೊಂಡ AstraZeneca; ಲಸಿಕೆ ಪಡೆದವರಲ್ಲಿ ಹೆಚ್ಚಿದ ಮತ್ತಷ್ಟು ಆತಂಕ..!

ಅದರಂತೆ ಪ್ರಜ್ವಲ್ ಪರ ವಕೀಲ ಅರುಣ್ ಎಸ್ಐಟಿ ಬಳಿ ಏಳು ದಿನ ಕಾಲಾವಕಾಶ ಕೇಳಿದ್ದರು. ಏಳು ದಿನ ಕಾಲಾವಕಾಶ ನೀಡಲು ಎಸ್ಐಟಿ ಅಧಿಕಾರಿಗಳು ನಿರಾಕರಿಸಿದ್ದರು. ಪ್ರಜ್ವಲ್ ತಾವೇ ಕೇಳಿಕೊಂಡಿದ್ದ ಹಾಗೆ ವಿಚಾರಣೆಗೆ ಹಾಜರಾಗಲು ಕೇಳಿದ್ದ ಕಾಲಾವಕಾಶ ಮೇ 07ಕ್ಕೆ ಮುಕ್ತಾಯ ಆಗಿದೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈಗಾಗಲೇ ಇಂಟರ್ ಪೋಲ್ ಮೂಲಕ 196 ದೇಶಗಳಿಗೆ ಆರೋಪಿ ಬಗ್ಗೆ ವಿವರವನ್ನು ಸರ್ಕಾರ ನೀಡಿದೆ. ವಿಚಾರಣೆಗೆ ಹಾಜರಾಗದಿದ್ರೆ ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾಗುವುದು ಪಕ್ಕಾ ಎನ್ನಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟಗಳು ಎದುರಾಗೋದು ಪಕ್ಕಾ.. ಯಾಕಂದರೆ..!

https://newsfirstlive.com/wp-content/uploads/2024/05/prajwal-revanna10.jpg

Load More