/newsfirstlive-kannada/media/post_attachments/wp-content/uploads/2024/05/prajwal-revanna10.jpg)
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಿಡಿಯೋ ಹಂಚಿಕೆ ವಿಚಾರದಲ್ಲಿ ಮತ್ತೊಬ್ಬ ಮಹಾನಾಯಕನ ಹೆಸರು ಕೇಳಿಬಂದಿದೆ.
ಪೆನ್ ಡ್ರೈನ್ ಹಂಚಿಕೆ ಆರೋಪ ಹೊತ್ತಿರೋ ನವೀನ್ ಗೌಡ ಈ ಗಂಭೀರ ಆರೋಪ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನವೀನ್ ಗೌಡ.. ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದ ಪೆನ್​ಡ್ರೈವ್ ಅನ್ನು ಅರಕಲುಗೂಡು ಶಾಸಕರಾದ ಎ ಮಂಜು ಅವರಿಗೆ ಏಪ್ರಿಲ್ 21 ರಂದು ನೀಡಿದ್ದೇನೆ. ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್ ಹಿಂದೆ ಮಹಾನಾಯಕ ಅರಕಲುಗೂಡು ಶಾಸಕರೇ ಆಗಿರಬಹುದು ಎಂದು ಆರೋಪಿಸಿದ್ದಾರೆ.
ಯಾರು ಈ ನವೀನ್ ಗೌಡ..?
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂಬ ಆರೋಪ ಇದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ ಬುಕ್​ನಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ನಂತರ ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಪೋಸ್ಟ್ ಮಾಡಿದ್ದ ಎಂಬ ಆರೋಪ ಇದೆ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್​ನ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ದೂರು ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ