ಹಠಾತ್ ಹೃದಯಾಘಾತ, ಕುಸಿದುಬಿದ್ದು ಬಿಜೆಪಿ ಸಂಸದ ನಿಧನ; ಸಿಎಂ ಸಂತಾಪ

author-image
Ganesh
Updated On
ಹಠಾತ್ ಹೃದಯಾಘಾತ, ಕುಸಿದುಬಿದ್ದು ಬಿಜೆಪಿ ಸಂಸದ ನಿಧನ; ಸಿಎಂ ಸಂತಾಪ
Advertisment
  • ಚುನಾವಣೆ ಹೊತ್ತಲ್ಲಿ ಬಿಜೆಪಿ ಮತ್ತೊಂದು ಆಘಾತ
  • ಮನೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದ ಸಂಸದ
  • ಈ ಬಾರಿಯ ಚುನಾಣೆಯ ಟಿಕೆಟ್ ಆಕಾಂಕ್ಷಿ ಆಗಿದ್ದರು

ಉತ್ತರ ಪ್ರದೇಶದ ಹತ್ರಾಸ್‌ನ ಬಿಜೆಪಿ ಸಂಸದ ರಾಜವೀರ್ ದಿಲೇರ್ (Rajveer Diler) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಂಸದರು ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ವಿಶ್ವದ ಮೊದಲ ‘Miss AI’ ಸೌಂದರ್ಯ ಸ್ಪರ್ಧೆ, ಗೆದ್ದ ಸುಂದರಿಗೆ ಬಂಪರ್ ಲಾಟರಿ..!

2019ರ ಲೋಕಸಭೆ ಚುನಾವಣೆಯಲ್ಲಿ ದಿಲೇರ್ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. 2017ರಲ್ಲಿ ಇಗ್ಲಾಸ್​ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂಸದರ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಸಂಸದ ರಾಜವೀರ್ ಸಿಂಗ್ ದಿಲೇರ್ ಜಿ ಅವರ ಅಕಾಲಿಕ ನಿಧನವು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಎಕ್ಸ್‌ ನಲ್ಲಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment