/newsfirstlive-kannada/media/post_attachments/wp-content/uploads/2024/10/haveri-Child-Missing.jpg)
ಹಾವೇರಿ: ನಿನ್ನೆ ಸುರಿದ ಮಳೆಗೆ 12 ವರ್ಷದ ಬಾಲಕನೋರ್ವ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ ಆ ಬಾಲಕ ಪತ್ತೆಯಾಗಿದ್ದಾನೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬಾಲಕನನ್ನು ಮೇಲೆತ್ತಿದ್ದಾರೆ.
ಇದನ್ನೂ ಓದಿ: ಬೈಕ್, ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಜೀವಬಿಟ್ಟ ನಾಲ್ವರು
ವೇದು ಎಂಬ ಬಾಲಕ ಸ್ನೇಹಿತರೊಂದಿಗೆ ಮಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳ ಸಿಬ್ಬಂದಿಗಳ ಸ್ಥಳಕ್ಕೆ ದೌಡಾಯಿಸಿ ಹುಡುಕಾಡಿದ್ದಾರೆ. ಈ ವೇಳೆ ಮೆಡಿಕಲ್ ಶಾಪ್ ಮುಂಭಾಗದಲ್ಲಿದ್ದ ಸ್ಲ್ಯಾಬ್​​ನಲ್ಲಿ ಪತ್ತೆಯಾಗಿದ್ದಾನೆ.
ಇದನ್ನೂ ಓದಿ: ಮಳೆಗೆ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ 12 ವರ್ಷದ ಬಾಲಕ.. ಕಣ್ಮರೆಯಾದವನಿಗಾಗಿ ಹುಡುಕಾಟ
ಪತ್ತೆಯಾದ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣವೇ ಜಿಲ್ಲಾಸ್ಪತ್ರೆಗೆ ಹೊತ್ತು ಸಾಗಿಸಿದ್ದಾರೆ. ಆ್ಯಂಬುಲೆನ್ಸ್ ನಲ್ಲಿ ಕೃತಕ ಆಕ್ಸಿಜನ್ ಹಾಕಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಬಾಲಕ ಬದುಕಿದ್ದಾನೆಂದು ಸಿಬ್ಬಂದಿಗಳು ಕೂಗಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us