newsfirstkannada.com

ಸಾಮೂಹಿಕ ಅತ್ಯಾ** ಆರೋಪ ಕೇಸ್​.. ಸಿಎಂ ಭೇಟಿಗೂ ಮುನ್ನ ಹಾವೇರಿಯಲ್ಲಿ ಮಹತ್ವದ ಬೆಳವಣಿಗೆ

Share :

Published January 15, 2024 at 11:05am

Update January 15, 2024 at 11:06am

    ಸಿಎಂ ತೆರಳುವ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅಂದರ್

    ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆಂದು ಆರೋಪ

    ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿರುವ ಪೊಲೀಸರು

ಹಾವೇರಿ: ಇಂದು ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆಗೆ ತೆರಳುತ್ತಿದ್ದಾರೆ. ಇದರ ಬೆನ್ನಲ್ಲೇ ಹಾನಗಲ್​ನ ಸಾಮೂಹಿಕ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸಾಧಿಕ್ ಅಗಸಿಮನಿ (29), ಶೋಯೆಬ್ ಮುಲ್ಲಾ (19) ಬಂಧಿತ ಆರೋಪಿಗಳು. ಈ ಇಬ್ಬರನ್ನು ಬಂಧಿಸುವ ಮೂಲಕ ಎಲ್ಲ ಆರೋಪಿಗಳನ್ನು ಅರೆಸ್ಟ್ ಮಾಡಿದಂತೆ ಆಗಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಹಾವೇರಿಗೆ ತೆರಳುತ್ತಿದ್ದಾರೆ. ಇದರಿಂದ ಅಲರ್ಟ್ ಆಗಿರುವ ಪೊಲೀಸರು ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಅತ್ಯಾಚಾರ ಆರೋಪದ ಬಳಿಕ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಸಂತ್ರಸ್ತೆ  ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.  ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟು 8 ಆರೋಪಿಗಳನ್ನ ಅರೆಸ್ಟ್ ಮಾಡಿದಂತೆ ಆಗಿದೆ.

ಅರೆಸ್ಟ್ ಆದ ಆರೋಪಿಗಳು

  • ಅಪತಾಬ್
  • ಮದರಸಾಬ್
  • ಅಬ್ದುಲ್ ಖಾದರ್
  • ಮಹಮದ್ ಸೈಪ್ (ಆಸ್ಪತ್ರೆಯಲ್ಲಿ ಚಿಕಿತ್ಸೆ)
  • ರೆಹಾನ್
  • ಇಮ್ರಾನ್
  • ಸಾಧಿಕ್ ಅಗಸಿಮನಿ
  • ಶೋಯೆಬ್ ಮುಲ್ಲಾ

ಸಂತ್ರಸ್ತೆಯನ್ನು ಭೇಟಿ ಮಾಡಲಿರೋ ಸಿಎಂ

ಸಿಎಂ ಸಿದ್ದರಾಮಯ್ಯ ಇಂದು ಹಾವೇರಿಗೆ ಭೇಟಿ ನೀಡುತ್ತಿದ್ದು ಈ ವೇಳೆ ಸಂತ್ರಸ್ತೆಯನ್ನು ಭೇಟಿಯಾಗಿ ಘಟನೆ ಬಗ್ಗೆ ವಿವರ ತಿಳಿದುಕೊಳ್ಳಲಿದ್ದಾರೆ. ಸಂತ್ರಸ್ತೆಯು ಆರೋಪಿಗಳನ್ನು ಬಂಧಿಸದೇ ಬೇರೆಯವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾಳೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ನೀಡದೆ ಶಿರಸಿಗೆ ಶಿಫ್ಟ್ ಮಾಡಿದ್ದಾರೆ ಎಂಬ ಆರೋಪ ಪೊಲೀಸರ ವಿರುದ್ಧ ಕೇಳಿಬಂದಿದೆ. ಈ ಎಲ್ಲದರ ನಡುವೆ ಬಿಜೆಪಿ ಪ್ರಕರಣವನ್ನು ಎಸ್​ಐಟಿ ಒಪ್ಪಿಸುವಂತೆ ಹೇಳಿದೆ. ಇವತ್ತಿನ ಸಿಎಂ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಾಮೂಹಿಕ ಅತ್ಯಾ** ಆರೋಪ ಕೇಸ್​.. ಸಿಎಂ ಭೇಟಿಗೂ ಮುನ್ನ ಹಾವೇರಿಯಲ್ಲಿ ಮಹತ್ವದ ಬೆಳವಣಿಗೆ

https://newsfirstlive.com/wp-content/uploads/2024/01/HVR_RAPE_CASE.jpg

Load More