/newsfirstlive-kannada/media/post_attachments/wp-content/uploads/2024/06/HVR-ACCIDET.jpg)
ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾನೆ. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅಪಘಾತದ ಬಗ್ಗೆ ಮಾತನಾಡಿರುವ ಎಸ್ಪಿ ಅಂಶು ಕುಮಾರ್ ರಿಯಾಕಡ.. ಹಾವೇರಿ ಬಳಿ ಭೀಕರ ಅಪಘಾತದಲ್ಲಿ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂಡು ಸ್ವಗ್ರಾಮಕ್ಕೆ ವಾಪಸ್ ಆಗುವ ವೇಳೆ ದುರಂತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಮೃತರ ಗುರುತು ಪತ್ತೆ..
- ಪರಶುರರಾಮ್ (45)
- ಭಾಗ್ಯ (40)
- ನಾಗೇಶ್ (50)
- ವಿಶಾಲಾಕ್ಷಿ (40)
- ಅರ್ಪಿತಾ (18)
- ಸುಭದ್ರಾಬಾಯಿ (65)
- ಪುಣ್ಯ (50)
- ಮಂಜುಳಾಬಾಯಿ (62)
- ಆದರ್ಶ (23)
- ಮಾನಸ (24)
- ರೂಪಾ (40)
- ಮಂಜುಳಾ (50)
- ಉಳಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ
ಇದನ್ನೂ ಓದಿ:ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ದೇವರ ದರ್ಶನಕ್ಕೆ ತೆರಳಿದ್ದ 13 ಭಕ್ತರು ದಾರುಣ ಸಾವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ