newsfirstkannada.com

ನಾಳೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ; ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬ

Share :

Published January 21, 2024 at 4:20pm

  ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ!

  ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಭಾಗಿ

  ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ದೇವೇಗೌಡ್ರ ಕುಟುಂಬ

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ ತೆರಳಿದೆ.

ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಈ ಮುನ್ನ ಮಾತಾಡಿದ ದೇವೇಗೌಡ್ರು, ಅಯೋಧ್ಯೆಯಲ್ಲಿ ನಡೆಯೋ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕಾಶ್ಮೀರದ ಮುಸ್ಲಿಮರು ಹೂವು ಕಳಿಸಿದ್ದಾರೆ. ಪಶ್ಚಿಮ ಬಂಗಾಳದ ಜನ ಕೂಡ ಹೂವಿನ ಮಾಲೆ ಕಟ್ಟಿಕೊಟ್ಟಿದ್ದಾರೆ. ಅನೇಕ ರಾಜ್ಯಗಳಿಂದ ಅಯೋಧ್ಯೆಗೆ ವಿಶೇಷ ಉಡುಗೊರೆಗಳು ಬಂದಿವೆ. ಹಿಂದೂಗಳು ಬಿಡಿ, ಮುಸ್ಲಿಮರೇ ಹೂವು ಮಳೆ ಸುರಿಸುತ್ತಿದ್ದಾರೆ. ಎಲ್ಲರೂ ಎಲ್ಲವನ್ನೂ ಅರ್ಥ ಮಾಡಿಕೊಳ್ಳಬೇಕಿದೆ. ಯಾರಿಗೆ ಯಾರು ಪ್ರೇರಣೆ ಮಾಡಲ್ಲ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ; ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬ

https://newsfirstlive.com/wp-content/uploads/2024/01/HDD-Family.jpg

Load More