newsfirstkannada.com

ರಾಮಲಲ್ಲಾ ಪ್ರತಿಷ್ಠಾಪನೆ.. ಐತಿಹಾಸಿಕ ಕ್ಷಣ ಕಣ್ತುಂಬಿಸಿಕೊಂಡ ದೇವೇಗೌಡ್ರ ಕುಟುಂಬ!

Share :

Published January 22, 2024 at 5:32pm

  ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ

  ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬ ಭಾಗಿ

  ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾದ ಗೌಡ್ರ ಕುಟುಂಬ

ಅಯೋಧ್ಯೆ: ಇಂದು ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬ ಭಾಗಿಯಾಗಿತ್ತು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

ಇನ್ನು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇವೇಗೌಡ್ರ ಕಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಹೀಗಾಗಿ ಇವರು ಕಾರ್ಯಕ್ರಮಕ್ಕೆ ಒಂದು ದಿನದ ಮುನ್ನವೇ ಹೋಗಿದ್ದಾರೆ. ಅಲ್ಲಿ ನಡೆಯುತ್ತಿರೋ ಪೂಜಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇಷ್ಟೇ ಅಲ್ಲ ದೇವೇಗೌಡ್ರ ಕುಟುಂಬ ಸಿಎಂ ಯೋಗಿ ಆದಿತ್ಯನಾಥ್​ ಅವರೊಂದಿಗೆ ಫೋಟೋ ತೆಗೆಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ಖುದ್ದು ಇಡೀ ಗೌಡ್ರ ಕುಟುಂಬ ವೀಕ್ಷಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮಲಲ್ಲಾ ಪ್ರತಿಷ್ಠಾಪನೆ.. ಐತಿಹಾಸಿಕ ಕ್ಷಣ ಕಣ್ತುಂಬಿಸಿಕೊಂಡ ದೇವೇಗೌಡ್ರ ಕುಟುಂಬ!

https://newsfirstlive.com/wp-content/uploads/2024/01/HDD-Family1.jpg

Load More