newsfirstkannada.com

‘ಕಾಸಿಗಾಗಿ ಪೋಸ್ಟಿಂಗ್‌ ದಂಧೆಗಿಳಿದ ಸಿದ್ದರಾಮಯ್ಯ ಸರ್ಕಾರ’- HDK ನೇರ ಆರೋಪ

Share :

28-06-2023

    'ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲೂ ಕಾಸಿಗಾಗಿ ಪೋಸ್ಟಿಂಗ್'

    ಕಾಂಗ್ರೆಸ್​​ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ನೇರ ಆರೋಪ

    ಒಂದೇ ಹುದ್ದೆಗೆ 4 ಶಿಫಾರಸು ಪತ್ರ ಕೊಟ್ಟಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಇಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ಪತ್ರಗಳನ್ನು ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಉಲ್ಲೇಖಿಸಿ ಟ್ವೀಟ್​ ಮಾಡಿರುವ ಹೆಚ್​​ಡಿಕೆ ಸರಿಯಾಗಿ ಚಾಟಿ ಬೀಸಿದ್ದಾರೆ.

ಪಂಚ ಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ. ಇದಕ್ಕೆ ಈ ವರದಿಯೇ ಸಾಕ್ಷಿ ಎಂದು ಟಾಂಗ್​ ಕೊಟ್ಟಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ? ಎಂದು ಪ್ರಶ್ನೆ ಮಾಡಿದ್ದಾರೆ.

ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಎಂದ ಹೆಚ್​​ಡಿಕೆ

ನಾಲ್ಕು ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿಯತ್ತ ಬೊಟ್ಟು ಮಾಡಿದ್ದಾರೆ.

ಈ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಕಾಸಿಗಾಗಿ ಪೋಸ್ಟಿಂಗ್‌ ದಂಧೆಗಿಳಿದ ಸಿದ್ದರಾಮಯ್ಯ ಸರ್ಕಾರ’- HDK ನೇರ ಆರೋಪ

https://newsfirstlive.com/wp-content/uploads/2023/06/HDK_2.jpg

Load More