newsfirstkannada.com

ಮಾಜಿ ಸಿಎಂ HD ಕುಮಾರಸ್ವಾಮಿ, ಬೊಮ್ಮಾಯಿ, ತುಕಾರಾಂ ರಾಜೀನಾಮೆ.. ಬೈ ಎಲೆಕ್ಷನ್ ಯಾವಾಗ?

Share :

Published June 15, 2024 at 6:14pm

Update June 15, 2024 at 6:18pm

  ಯಾವ್ಯಾವ ಕ್ಷೇತ್ರಕ್ಕೆ ಮೂವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.?

  ನೂತನ ಕೇಂದ್ರ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ HDK

  ಎಂಎಲ್​ಎ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೂತನ ಸಂಸದರು

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿರುವ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ, ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿಯವರು ಈ ಬಾರಿ ಎಲೆಕ್ಷನ್​ನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ ವತಿಯಿಂದ ಗೆಲುವು ಸಾಧಿಸಿದ್ದರು. ಬಳಿಕ ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೇಟ್​ನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಹೆಚ್​​.ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಕುಮಾರಸ್ವಾಮಿಯವರು ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಸ್ಪೀಕರ್​ ಯುಟಿ ಖಾದರ್ ಅವರು ಕುಮಾರಸ್ವಾಮಿಯವರ ರಾಜೀನಾಮೆ ಪತ್ರವನ್ನು ಅಂಗೀಕಾರ ಮಾಡಿದ್ದಾರೆ.

ಬಿಜೆಪಿ ಲೋಕಸಭಾ ಸದಸ್ಯರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದರು. ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಈ ಬಾರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಿಂದ ಆಯ್ಕೆ ಆಗಿದ್ದಾರೆ. ಹೀಗಾಗಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಗೆ ತೆರಳಿ ಅಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಇನ್ನು ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇ ತುಕಾರಾಂ ಅವರು ಭರ್ಜರಿ ಜಯ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಡೂರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ ತುಕಾರಾಂ ಅವರು ರಾಜಿನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರು ರಾಜೀನಾಮೆ ನೀಡಿದ್ದು ಬೈಎಲೆಕ್ಷನ್​ನಲ್ಲಿ ನೂತನ ಶಾಸಕರನ್ನು ಮತದಾರರು ಆಯ್ಕೆ ಮಾಡಲಿದ್ದಾರೆ. ಮುಂದಿನ 6 ತಿಂಗಳೊಳಗೆ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಿಎಂ HD ಕುಮಾರಸ್ವಾಮಿ, ಬೊಮ್ಮಾಯಿ, ತುಕಾರಾಂ ರಾಜೀನಾಮೆ.. ಬೈ ಎಲೆಕ್ಷನ್ ಯಾವಾಗ?

https://newsfirstlive.com/wp-content/uploads/2024/06/HDK_UT_KHADAR.jpg

Load More