newsfirstkannada.com

‘ಘಟಬಂಧನ’ಕ್ಕೆ ಒಳಗಾದ ಕಾಂಗ್ರೆಸ್ ರಾಜ್ಯದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ -ಸಿದ್ದು ಸರ್ಕಾರದ ವಿರುದ್ಧ HDK ಕಿಡಿಕಿಡಿ..!

Share :

18-07-2023

    ಘಟಬಂಧನ್ ನಾಯಕರ ಸ್ವಾಗತಕ್ಕೆ IAS​​ ಅಧಿಕಾರಿಗಳ ನೇಮಕ

    ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿಯಿಂದಲೂ ವಿರೋಧ

    ಕುಮಾರಸ್ವಾಮಿ ಆರೋಪಕ್ಕೆ ಉತ್ತರ ಕೊಟ್ಟ CM ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ UPA (United Progressive Alliance)ನ ಪ್ರಮುಖ ನಾಯಕರು ನಿನ್ನೆಯಿಂದ ಬೆಂಗಳೂರಲ್ಲಿ ಟಿಕಾಣಿ ಹೂಡಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದಾರೆ. ವಿವಿಧ ರಾಜ್ಯಗಳಿಂದ ಬಂದಿರುವ ರಾಜಕೀಯ ನಾಯಕರ ಸೇವೆಗೆ ಐಎಎಸ್​​ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಈ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ ಕೂಡ ನೀಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಐಎಎಸ್​ ಅಧಿಕಾರಿಗಳ ಪಟ್ಟಿಯನ್ನೂ ಲಗತ್ತಿಸಿದ್ದಾರೆ. ‘ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್​ ತಪ್ಪು ಮಾಡಿದೆ. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಎಸಗಿದ ಘೋರ ಅಪಚಾರ

ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರ್ಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಕಿಡಿಕಾರಿದ್ದಾರೆ.

ಅಹಂಕಾರದ ಪರಮಾವಧಿ..!

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ. ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ ಎಂದು ಆಗ್ರಹಿಸಿದ್ದಾರೆ.

ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಖಂಡಿಸಿದ ಬಿಜೆಪಿ..!

ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಸವರಾಜ್ ಬೊಮ್ಮಾಯಿ, ಘಟಬಂಧನ್ ಸಭೆಗೆ ಐಎಎಸ್ ಅಧಿಕಾರಿಗಳನ್ನು ನೇಮಕಮಾಡಿರೋದು ಸರ್ಕಾರಕ್ಕೆ ನಾಚಿಕೆ ಆಗಬೇಕು. ಕೂಡಲೇ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಪಿಆರ್ಓ ಕೆಸಲಕ್ಕೆ ನೇಮಕ ಮಾಡಿರೋದು ನಾಚಿಕೆಗೇಡಿನ ಕೆಲಸ ಎಂದಿದ್ದಾರೆ.

ಸಿದ್ದರಾಮಯ್ಯ ಸ್ಪಷ್ಟನೆ..!

ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿತ್ತು. ಶಿಷ್ಟಾಚಾರದ ಪ್ರಕಾರ ಆ ಎಲ್ಲ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಇದರ ಹೊರತಾಗಿ ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಯಾವ ಪಾತ್ರವೂ ಇಲ್ಲ. ಈ ರೀತಿಯ ಶಿಷ್ಟಾಚಾರದ ಪಾಲನೆ ಹಿಂದಿನ ಎಲ್ಲ ಸರ್ಕಾರದ ಕಾಲದಲ್ಲಿಯೂ ನಡೆದಿತ್ತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಘಟಬಂಧನ’ಕ್ಕೆ ಒಳಗಾದ ಕಾಂಗ್ರೆಸ್ ರಾಜ್ಯದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ -ಸಿದ್ದು ಸರ್ಕಾರದ ವಿರುದ್ಧ HDK ಕಿಡಿಕಿಡಿ..!

https://newsfirstlive.com/wp-content/uploads/2023/07/HDK-5.jpg

Load More