newsfirstkannada.com

‘ಹಾಸನ ಸೆಕ್ಸ್​​ ವಿಡಿಯೋ ಪೆನ್​ಡ್ರೈವ್​​ಗೆ ತುಂಬಿ ಹಂಚಿದ್ದು ಇವರೇ’- ಇಂಚಿಂಚೂ ಮಾಹಿತಿ ಬಿಚ್ಚಿಟ್ಟ HDK

Share :

Published May 7, 2024 at 7:29pm

    ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

    ವಿಡಿಯೋ ಲೀಕ್ ಪಿತೂರಿ ಕಿಂಗ್ ಪಿನ್ ಡಿಕೆಶಿ ಎಂದು ಗಂಭೀರ ಆರೋಪ

    ಸಂಪುಟದಿಂದ ಡಿಸಿಎಂ ಡಿಕೆ ಶಿವಕುಮಾರ್​​ ವಜಾಕ್ಕೆ ಹೆಚ್​​ಡಿಕೆ ಒತ್ತಾಯ!

ಬೆಂಗಳೂರು: ಹಾಸನ ಪ್ರಕರಣದ ನಿಷ್ಪಕ್ಷಪಾತ ತನಿಖೆ ವಿಶೇಷ ತನಿಖಾ ದಳ (SIT) ದಿಂದ ಸಾಧ್ಯವಿಲ್ಲ. SIT ‘ ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ ‘ ಆಗಿ ಹಾಗೂ ‘ ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್ ‘ ಆಗಿ ಕೆಲಸ ಮಾಡುತ್ತಿದೆ. ಅವರಿಬ್ಬರೂ ಹಾಗೂ ಪ್ರಭಾವೀ ಸಚಿವರ ಒತ್ತಡಕ್ಕೆ SIT ಸಿಲುಕಿದೆ. ಪೆನ್ ಡ್ರೈವ್ ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು, ತಪ್ಪಿದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಹಿಳೆಯರ ವಿಡಿಯೋಗಳನ್ನು ಪೆನ್ ಡ್ರೈವ್ ಗಳಿಗೆ ತುಂಬಿ ಹಾದಿಬೀದಿಯಲ್ಲಿ ಸುರಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು ಹಾಗೂ ವಿಡಿಯೋ ಲೀಕ್ ಪ್ರಕರಣದಲ್ಲಿ ನೇರವಾಗಿ ಶಾಮೀಲಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು. ಎರಡೂ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ಮಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಜಾತ್ಯತೀತ ಜನತಾದಳ ಪಕ್ಷವು ರಾಜ್ಯಪಾಲರಿಗೆ ದೂರು ನೀಡಲಿದೆ ಎಂದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಈ ಎಲ್ಲಾ ವಿಷಯಗಳನ್ನು ತಿಳಿಸಿದರಲ್ಲದೆ, ಸಿಬಿಐ ತನಿಖೆ, ಸಂಪುಟದಿಂದ ಡಿಕೆಶಿ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ರಾಜ್ಯದಲ್ಲಿ ನಡೆದ ಈ ಘಟನೆ ಅತ್ಯಂತ ಕೆಟ್ಟದ್ದು. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲು ಇನ್ನೆರಡು ದಿನ ಇರುವಾಗಲೇ ಪೆನ್ ಡ್ರೈವ್ ಹಂಚಿಕೆ ಮಾಡಿದ್ದಾರೆ. ಪೋಲಿಸರನ್ನು ರಕ್ಷಣೆಗೆ ಇಟ್ಟುಕೊಂಡು ಮಾಡಿದ್ದಾರೆ. ರಾಜ್ಯದ ಎಲ್ಲ ಕಡೆ ಹಂಚಿದ್ದಾರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಹಂಚಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಆರೋಪ ಮಾಡಿದರು.

ಇದನ್ನೂ ಓದಿ: ಏನಿಲ್ಲ.. ಏನಿಲ್ಲ.. H.D ರೇವಣ್ಣ 4 ದಿನ ಕಸ್ಟಡಿಯಲ್ಲಿದ್ದರೂ SITಗೆ ಪ್ರಯೋಜನ ಇಲ್ವಾ? ಏನಾಯ್ತು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಹಾಸನ ಸೆಕ್ಸ್​​ ವಿಡಿಯೋ ಪೆನ್​ಡ್ರೈವ್​​ಗೆ ತುಂಬಿ ಹಂಚಿದ್ದು ಇವರೇ’- ಇಂಚಿಂಚೂ ಮಾಹಿತಿ ಬಿಚ್ಚಿಟ್ಟ HDK

https://newsfirstlive.com/wp-content/uploads/2024/03/HDK-2.jpg

Load More