newsfirstkannada.com

VIDEO: ಮೇ 31ಕ್ಕೆ ಪ್ರಜ್ವಲ್ ರೇವಣ್ಣ ವಾಪಸ್.. ನನಗೀಗ ಸಮಾಧಾನ ತಂದಿದೆ; HD ಕುಮಾರಸ್ವಾಮಿ

Share :

Published May 27, 2024 at 5:07pm

    ನನ್ನ ಮೇಲೆ ಗೌರವ ಇದ್ದರೆ ವಾಪಸ್ ಬರುವಂತೆ ಮನವಿ ಮಾಡಿದ್ದೆ-HDK

    ಹಾಸನದಲ್ಲಿ ವೈರಲ್‌ ಆದ ಅಶ್ಲೀಲ ವಿಡಿಯೋ ಹಾಗೂ ಪೆನ್‌ಡ್ರೈವ್ ಕೇಸ್​

    ಎಸ್​ಐಟಿ ತನಿಖೆ ನಡೆಯುತ್ತಿದೆ, ಎಲ್ಲಿಗೆ ತಂದು ನಿಲ್ಲಿಸುತ್ತಾರೋ ನೋಡೋಣ!

ಚಿಕ್ಕಬಳ್ಳಾಪುರ: ಬರೋಬ್ಬರಿ ಒಂದು ತಿಂಗಳ ಬಳಿಕ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಇಡೀ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ವೈರಲ್‌ ಆದ ಅಶ್ಲೀಲ ವಿಡಿಯೋ ಹಾಗೂ ಪೆನ್‌ಡ್ರೈವ್ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು.

ಇದನ್ನೂ ಓದಿ: ‘ನಾನು ಡಿಪ್ರೆಶನ್‌ಗೆ ಹೋಗಿ ಐಸೋಲೇಷನ್‌ಗೆ ಒಳಗಾಗಿದ್ದೆ’- ಪ್ರಜ್ವಲ್​ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು?

ಇದೀಗ ಒಂದು ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೇ 31ಕ್ಕೆ ಭಾರತಕ್ಕೆ ವಾಪಸ್ ಬರುವ ಬಗ್ಗೆ ವಿಡಿಯೋ ಮಾಡುವ ಮೂಲಕ ಹೇಳಿಕೆ ನೀಡಿದ್ದಾರೆ. ಇನ್ನು, ಚಿಕ್ಕಬಳ್ಳಾಪುರ ನಗರದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು.

ಇದೇ ವೇಳೆ ಪ್ರಜ್ವಲ್ ರೇವಣ್ಣ ಮೇ 31 ಕ್ಕೆ ಭಾರತಕ್ಕೆ ವಾಪಸ್ ಬರುವ ಬಗ್ಗೆ ವಿಡಿಯೋ ನೋಡಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ನನ್ನ ಮೇಲೆ ಗೌರವ ಇದ್ದರೆ ವಾಪಸ್ ಬರುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಓಗೊಟ್ಟು ಆತ ವಾಪಸ್ ಬರುತ್ತಿರೋದು ನನಗೂ ಒಂದು ರೀತಿಯಲ್ಲಿ ಸಮಾಧಾನ ತಂದಿದೆ. ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್​ಐಟಿ ತನಿಖೆ ನಡೆಯುತ್ತಿದೆ ಅವರು ಎಲ್ಲಿಗೆ ತಂದು ನಿಲ್ಲಿಸುತ್ತಾರೋ ನೋಡೋಣ ಅಂತ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಮೇ 31ಕ್ಕೆ ಪ್ರಜ್ವಲ್ ರೇವಣ್ಣ ವಾಪಸ್.. ನನಗೀಗ ಸಮಾಧಾನ ತಂದಿದೆ; HD ಕುಮಾರಸ್ವಾಮಿ

https://newsfirstlive.com/wp-content/uploads/2024/04/HDK-Prajwal-Revanna.jpg

Load More