newsfirstkannada.com

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಈಗ ಹೇಗಿದೆ HDK ಆರೋಗ್ಯ ಸ್ಥಿತಿ

Share :

31-08-2023

  ಐಸಿಯುನಲ್ಲಿ ಹೆಚ್​.ಡಿ ಕುಮಾರಸ್ವಾಮಿಗೆ ಚಿಕಿತ್ಸೆ

  HDK ಚೇತರಿಕೆಗಾಗಿ ಪ್ರಾರ್ಥಿಸಿದ ಸಿದ್ದರಾಮಯ್ಯ

  ದೂರವಾಣಿ ಕರೆ ಮೂಲಕ BSY ಆರೋಗ್ಯ ವಿಚಾರಣೆ

ಜೆಡಿಎಸ್​ ಪಾಳಯದಲ್ಲಿ ನಿನ್ನೆ ಸಣ್ಣದೊಂದು ಆತಂಕ ಮನೆ ಮಾಡಿತ್ತು. ಅದಕ್ಕೆ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ಸೇರಿದ್ದು.. ಅವ್ರಿಗೆ ಈಗಲೂ ಚಿಕಿತ್ಸೆ ಮುಂದುವರಿದೆ. ಹಾಗಾದ್ರೆ ಕುಮಾರಸ್ವಾಮಿ ಆರೋಗ್ಯ ಈಗ ಹೇಗಿದೆ?

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್​ಡಿಕೆ ಪತ್ನಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಚೇತರಿಕೆ ಕಂಡಿದ್ದು, ಅಪೋಲೋದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರರೆಸಲಾಗ್ತಿದ್ದು, ಐಸಿಯುನಲ್ಲಿರುವ ಹೆಚ್​​ಡಿಕೆ ಅವರನ್ನ ಇಂದು ವಾರ್ಡ್​ಗೆ ಶಿಫ್ಟ್​​​ ಮಾಡುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ವಿದೇಶ ಪ್ರವಾಸ ಮಾಡಿ ಬಂದಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸದ್ಯ ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಪಕ್ಷದ ಕಾರ್ಯಕರ್ತರು, ನಾಯಕರ ಕಾರ್ಯಕ್ರಮ, ಗೃಹ ಪ್ರವೇಶ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸತತವಾಗಿ ಪಾಲ್ಗೊಂಡಿದ್ದರು. ಇತ್ತ ಆರೋಗ್ಯ ಕ್ಷೀಣಿಸಿದ ಕಾರಣ ಜ್ವರ ಹಾಗೂ ಸುಸ್ತು ಕಾಣಿಸಿಕೊಂಡಿದೆ. ನಿನ್ನೆ ಬೆಳಗಿನ ಜಾವ 3.40ರ ಸುಮಾರಿಗೆ ಆರೋಗ್ಯದ ಬಳಲಿಕೆ ತೀವ್ರಗೊಂಡ ಕಾರಣ ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿತ್ತು.

ತೀವ್ರ ಜ್ವರ, ಸುಸ್ತು ಮತ್ತು ವೀಕ್ನೆಸ್​

ನುಸುಕಿನ ಜಾವ ಮಾಜಿ ಸಿಎಂ ಕುಮಾರಸ್ವಾಮಿ, ತೀವ್ರ ಜ್ವರ, ಸುಸ್ತು ಮತ್ತು ವೀಕ್ನೆಸ್​ ಅಂತ ಆಸ್ಪತ್ರೆಗೆ ದಾಖಲಾಗಿದ್ರು. ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಡಾಕ್ಟರ್ ಪಿ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಆರೋಗ್ಯ ಚೇತರಿಸಿಕೊಂಡಿದೆ ಅನ್ನೋದೇ ಸಮಾಧಾನ. ಇನ್ನು ಹೆಚ್​ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಪತಿ ಆರೋಗ್ಯವನ್ನು ವಿಚಾರಿಸಿದ್ರು. ಆಸ್ಪತ್ರೆಯಿಂದ ಹೊರ ಬಂದು ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ ನಿಮ್ಮ ಮುಂದೆ ಇರ್ತಾರೆ ಎಂಬ ಭರವಸೆಯನ್ನ ನೀಡಿದ್ದಾರೆ.

ಸಂಸದ ಪ್ರಜ್ವಲ್​ ರೇವಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದು ಮಾತನಾಡಿದ ಅವರು, ಕುಮಾರಣ್ಣ ನಾಳೆ ಬರ್ತೀನ್‌ ಬಿಡೋ ಅಂತ ಹೇಳ್ತಿದ್ದಾರೆ. ಹಿ ಈಸ್​ ಫೈನ್​. ನಾನು ಹೋದಾಗ ಊಟ ಮಾಡುತ್ತಿದ್ದರು. ಚೆನ್ನಾಗಿದ್ದಾರೆ, ಕಾರ್ಯಕರ್ತರು ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ. ಆಸ್ಪತ್ರೆ ಸೇರಿರೋ ಕುಮಾರಸ್ವಾಮಿ ಬೇಗ ಗುಣಮುಖರಾಗಲಿ ಅಂತಾ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

ಹೆಚ್​ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಬೊಮ್ಮಾಯಿ, ಆರೋಗ್ಯದ ಮಾಹಿತಿ ಪಡೆದುಕೊಂಡರು. ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದರು. ಒಟ್ನಲ್ಲಿ ದಳಪತಿಯ ಆರೋಗ್ಯ ಮತ್ತಷ್ಟು ಸುಧಾರಿಸಿ, ಆದಷ್ಟು ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿ ಎಂದು ಅವರ ಅಭಿಮಾನಿಗಳು, ಜೆಡಿಎಸ್​ ಕಾರ್ಯಕರ್ತರ ಪ್ರಾರ್ಥನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಈಗ ಹೇಗಿದೆ HDK ಆರೋಗ್ಯ ಸ್ಥಿತಿ

https://newsfirstlive.com/wp-content/uploads/2023/08/HDK-2-1.jpg

Load More