ಹೊಸಪೇಟೆ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ JDS ಶಾಸಕರ ವಾಸ್ತವ್ಯ
ಜೆಡಿಎಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದಲ್ಲಿದ್ದಾರಾ ದಳಪತಿ
ನಾಳೆ ಶಾಸಕರೊಂದಿಗೆ ಮಹತ್ವದ ಸಭೆ ಕರೆದಿರುವ ಹೆಚ್.ಡಿ ಕುಮಾರಸ್ವಾಮಿ
ಮಡಿಕೇರಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕಾಫಿನಾಡಿನ ಖಾಸಗಿ ರೆಸಾರ್ಟ್ನಲ್ಲಿ ಬೀಡು ಬಿಟ್ಟಿದ್ದಾರೆ. ಎಂಎಲ್‌ಸಿ ಎಸ್.ಎಲ್.ಭೋಜೇಗೌಡರ ಮಗಳ ನಿಶ್ಚಿತಾರ್ಥ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಖಾಸಗಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಹಾಗೂ ಎಚ್.ಡಿ ಕುಮಾರಸ್ವಾಮಿ ಅವರು ಆಗಮಿಸಿದ್ದಾರೆ.
ನಿಶ್ಚಿತಾರ್ಥಕ್ಕೆ ಎರಡು ದಿನ ಮುಂಚಿತವಾಗಿಯೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಹೊಸಪೇಟೆ ಗ್ರಾಮದ ಹನಿ ಡ್ಯೂ ರೆಸಾರ್ಟ್‌ಗೆ ಬಂದಿದ್ದಾರೆ. ನಿಶ್ಚಿತಾರ್ಥದ ನೆಪದಲ್ಲಿ ಜೆಡಿಎಸ್ ಶಾಸಕರು ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನೂ ನಾಳೆ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಹೀಗಾಗಿ ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದಲ್ಲಿದ್ದಾರಾ ಹೆಚ್‌ಡಿಕೆ ಎಂಬ ಪ್ರಶ್ನೆಯೂ ಮೂಡಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ಹಲವು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಜೆಡಿಎಸ್ ಹಿರಿಯ ನಾಯಕ ಜಿ.ಟಿ ದೇವೇಗೌಡರೇ ಡಿಕೆ ಶಿವಕುಮಾರ್ ಕೊಟ್ಟ ಆಫರ್ ಬಗ್ಗೆ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹೆಚ್.ಡಿ ಕುಮಾರಸ್ವಾಮಿ ಅವರ ರೆಸಾರ್ಟ್ ವಾಸ್ತವ್ಯ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ