ಮಾವು ಬೆಳೆಗಾರರಿಗೆ ಗುಡ್ ನ್ಯೂಸ್; HD ಕುಮಾರಸ್ವಾಮಿ ಪತ್ರದ ಬೆನ್ನಲ್ಲೇ ಬೆಂಬಲ ಬೆಲೆ ಘೋಷಣೆ

author-image
Bheemappa
Updated On
ಮಾವು ಬೆಳೆಗಾರರಿಗೆ ಗುಡ್ ನ್ಯೂಸ್; HD ಕುಮಾರಸ್ವಾಮಿ ಪತ್ರದ ಬೆನ್ನಲ್ಲೇ ಬೆಂಬಲ ಬೆಲೆ ಘೋಷಣೆ
Advertisment
  • ಕೇವಲ ಒಂದೇ 1 ಗಂಟೆಯಲ್ಲಿ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು
  • ಕೇಂದ್ರ ಸರ್ಕಾರದಲ್ಲಿ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಭಾವ‌
  • ಕ್ವಿಂಟಲ್‌ ಮಾವುಗೆ ಎಷ್ಟು ಸಾವಿರ ರೂಪಾಯಿ ಘೋಷಣೆ ಆಗಿದೆ?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕುಮಾರಸ್ವಾಮಿಯವರು ಪತ್ರ ಬರೆದ ಕೇವಲ ಒಂದೇ ಒಂದು ಗಂಟೆಯಲ್ಲಿ ರಾಜ್ಯದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.

ಮಾವು ಬೆಲೆ ಕುಸಿತದಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಮಾವು ಬೆಳೆಗಾರರು ಕಂಗಾಲಾಗಿದ್ದು ನೆರವಿಗೆ ಬರಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್ ಚೌಹಣ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪತ್ರ ಇಂದು ಬರೆದಿದ್ದರು. ಇದಕ್ಕೆ ಕೇಂದ್ರ ಕೃಷಿ ಸಚಿವರು ತಕ್ಷಣ ಸ್ಪಂದಿಸಿದ್ದಾರೆ.

ಇದನ್ನೂ ಓದಿ:ಪ್ರಾಂಶುಪಾಲ ಜೊತೆ ಸೇರಿ ವಯಸ್ಸಿಗೆ ಬಂದ ಮಗನನ್ನೇ ಮುಗಿಸಿದ ಹೆತ್ತ ತಾಯಿ.. ಅಸಲಿಗೆ ಆಗಿದ್ದೇನು?

publive-image

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪತ್ರ ಬರೆದ ಕೇವಲ 1 ಗಂಟೆಯಲ್ಲೇ ಪರಿಹಾರ ಘೋಷಣೆ ಮಾಡಲಾಗಿದೆ. 2025/26 ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಲಾಗಿದ್ದು ಪ್ರತಿ ಕ್ವಿಂಟಲ್‌ಗೆ 1,616 ರೂಪಾಯಿ ಪರಿಹಾರ ಧನ ಘೋಷಣೆ ಮಾಡಲಾಗಿದೆ. ರಾಜ್ಯದ 2,50,000 ಮೆಟ್ರಿಕ್ ಟನ್‌ಗಳ ಮಾವಿಗೆ ಪರಿಹಾರ ಧನ ಸಿಗಲಿದೆ. ಎಂಐಎಸ್ ಯೋಜನೆಯಡಿ ಪರಹಾರ ನೀಡಲು ಕೇಂದ್ರದ ಕೃಷಿ ಸಚಿವರಿಂದ ಅನುಮೋದನೆ ಸಿಕ್ಕಿದೆ.

ಇನ್ನು ಈ ಸಂಬಂಧ ಹೆಚ್​.ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಪತ್ರ ಸಮೇತ ಇದನ್ನು ಶೇರ್ ಮಾಡಿಕೊಂಡಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ ಅವರ ಸರ್ಕಾರದ ರೈತಪರ ಬದ್ಧತೆ, ಅಚಲತೆಗೆ ಹೃದಯ ಪೂರ್ವಕ ಧನ್ಯವಾದಗಳು. ಎಂಐಎಸ್​ ಅಡಿ ಬೆಂಬಲ ಬೆಲೆ ಘೋಷಿಸಿದ್ದಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯದ ಮಾವು ಬೆಳೆಗಾರರ ಪರವಾಗಿ ಹೆಚ್​​ಡಿಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಮೊದಲು ರಾಜ್ಯ ಸರ್ಕಾರಕ್ಕೆ ಮಾವು ಬೆಳೆಗಾರರು ಬೆಂಬಲ ಬೆಲೆಗೆ ಒತ್ತಾಯಿಸಿದ್ದರು. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ.


">June 24, 2025

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment