newsfirstkannada.com

ದೆಹಲಿಯಲ್ಲಿ ಅಮಿತ್ ಶಾ ಜೊತೆ HDK, ನಿಖಿಲ್‌ ಬ್ರೇಕ್ ಫಾಸ್ಟ್ ಮೀಟಿಂಗ್‌; ಚರ್ಚೆ ಆಗಿದ್ದೇನು?

Share :

Published February 22, 2024 at 11:48am

Update February 22, 2024 at 11:49am

    ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ನಿಖಿಲ್‌

    ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆಯ ಕುರಿತು ಮಹತ್ವದ ಚರ್ಚೆ

    ರಾಜ್ಯಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ರಣತಂತ್ರ

ನವದೆಹಲಿ: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್‌ ನಾಯಕರ ಬುಲಾವ್ ಮೇರೆಗೆ ಬೆಳಗ್ಗೆಯೇ ಅಮಿತ್ ಶಾ ಮನೆಗೆ ತೆರಳಿದ ಹೆಚ್‌ಡಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ಸಾಥ್ ನೀಡಿದ್ದರು.

ಬ್ರೇಕ್ ಫಾಸ್ಟ್ ಜೊತೆ ಮೀಟಿಂಗ್ ನಡೆಸಿರುವ ಅಮಿತ್ ಶಾ ಮತ್ತು ಹೆಚ್‌.ಡಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಅಮಿತ್ ಶಾ ಅವರ ಬಳಿ ಕುಮಾರಸ್ವಾಮಿ ಅವರು ಜೆಡಿಎಸ್‌ಗೆ ಮೂರು ಕ್ಷೇತ್ರವನ್ನು ಬಿಟ್ಟು ಕೊಡುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ನಾಯಕರಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ಆದರೆ ಉಭಯ ನಾಯಕರು ಸೀಟು ಹಂಚಿಕೆಯ ಬಗ್ಗೆ ಇಂದು ನಿರ್ಧಾರ ಕೈಗೊಂಡಿಲ್ಲ. ಮುಂದಿನ ಸಭೆಯಲ್ಲಿ ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಸ್ಟಾರ್ ಸಿಂಗರ್ ಸೋನಾ..! ಕಾರಣ..?

ಇದೇ ವೇಳೆ ಫೆಬ್ರವರಿ 27ರಂದು ನಡೆಯುವ ರಾಜ್ಯಸಭಾ ಚುನಾವಣೆ ಬಗ್ಗೆಯೂ ಅಮಿತ್ ಶಾ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಕರ್ನಾಟಕದ 4 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಯ ಗೆಲುವಿನ ಬಗ್ಗೆಯೂ ಅಮಿತ್ ಶಾ ಜೊತೆ ಹೆಚ್‌ಡಿಕೆ ಚರ್ಚೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೆಹಲಿಯಲ್ಲಿ ಅಮಿತ್ ಶಾ ಜೊತೆ HDK, ನಿಖಿಲ್‌ ಬ್ರೇಕ್ ಫಾಸ್ಟ್ ಮೀಟಿಂಗ್‌; ಚರ್ಚೆ ಆಗಿದ್ದೇನು?

https://newsfirstlive.com/wp-content/uploads/2024/02/HDK-Amith-Sha.jpg

Load More