ಮಂಡ್ಯದಲ್ಲಿ ಕುಮಾರಸ್ವಾಮಿಗೆ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು; ಕಾಂಗ್ರೆಸ್​​ಗೆ ಹೀನಾಯ ಸೋಲು

author-image
Ganesh Nachikethu
Updated On
HDK ಕಾಲಘಟ್ಟದ ಹಗರಣ ಆರೋಪ; ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ ಕೇಳಿದ ವರದಿ 10 ತಿಂಗಳಿಂದ ಬಾಕಿ?
Advertisment
  • ಕರ್ನಾಟಕದಲ್ಲಿ ತಾರಕಕ್ಕೇರಿದ ಲೋಕಸಭಾ ಚುನಾವಣಾ ಕಾವು
  • ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು
  • ಸ್ಟಾರ್​ ಚಂದ್ರು ವಿರುದ್ಧ ಬರೋಬ್ಬರಿ 2 ಲಕ್ಷಗಳ ಅಂತರದಿಂದ ಜಯ!

ಮಂಡ್ಯ: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಜೋರಾಗಿದೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಹೆಚ್​​ಡಿಕೆ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ಸದ್ಯಕ್ಕೆ ಲಭ್ಯವಿರೋ ಮಾಹಿತಿ ಪ್ರಕಾರ ಕುಮಾರಸ್ವಾಮಿಗೆ 530453 ಸಿಕ್ಕಿವೆ. ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರುಗೆ 330412 ವೋಟ್​ಗಳು ಬಿದ್ದಿವೆ. ಕೌಂಟಿಂಗ್​ ಇನ್ನೂ ಮುಂದುವರಿದಿದ್ದು, ಹೆಚ್​​ಡಿಕೆ ಗೆಲುವು ಪಕ್ಕಾ ಆಗಿದೆ.

ಹಾಸನ ಅಶ್ಲೀಲ ವಿಡಿಯೋ ಕೇಸ್​ನಿಂದ ಬೇಸತ್ತಿದ್ದ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಮೂರು ದಿನಗಳ ಕಾಲ ಪ್ರವಾಸದಲ್ಲಿ ಇದ್ದರು. ಬಳಿಕ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಇಂದು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: ಬಿ.ವೈ ರಾಘವೇಂದ್ರ ಎದುರು ಅಖಾಡದಲ್ಲಿ RCB ಅಭಿಮಾನಿ; ಕೊಹ್ಲಿ ಫ್ಯಾನ್​ಗೆ ಸಿಕ್ಕಿದ್ದು ಎಷ್ಟು ವೋಟ್​?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment