/newsfirstlive-kannada/media/post_attachments/wp-content/uploads/2024/06/SURAJ_HDK.jpg)
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬೆನ್ನಲ್ಲೇ ಅವರ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಹಾಡಹಗಲೇ ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ಪಾಪಿಗಳು.. ಗಂಡನ ಕಡೆಯವರಿಂದ ನಡೀತಾ ಕೃತ್ಯ?
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.. ಸೂರಜ್ ರೇವಣ್ಣ ಕುರಿತ ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಗರಂ ಆಗಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಹತ್ರ ಚರ್ಚೆ ಮಾಡಬಾರದು. ರಾಜ್ಯಕ್ಕೆ ಸಂಬಂಧಪಟ್ಟ ವಿಷ್ಯಗಳಿದ್ರೆ ಚರ್ಚೆ ಮಾಡಿ.
ಆ ವಿಷ್ಯಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡ್ತೀರಾ. ಅದರ ಅವಶ್ಯಕತೆ ಏನಿದೆ. ಅದಕ್ಕೆ ಕಾನೂನು ಇರುತ್ತದೆ. ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಅದು ಯಾತಕ್ಕೆ ಬರುತ್ತದೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ