Advertisment

ದೇವೇಗೌಡರ ಮೇಲೆ ಕಿಡಿಕಾರಿದ ಸಿದ್ದು ಮೇಲೆ HDK ಅಟ್ಯಾಕ್‌.. ರಾಕೇಶ್ ಸಾವಿನ ರಹಸ್ಯದ ಬಗ್ಗೆ ಹೇಳಿದ್ದೇನು?

author-image
admin
Updated On
‘ಅಂದು ಸಿದ್ದು ಮರ್ಯಾದೆ ಉಳಿಸಿದ್ದು ಮೋದಿ’- ರಾಕೇಶ್​ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ HDK
Advertisment
  • ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್‌.ಡಿ ಕುಮಾರಸ್ವಾಮಿ ತರಾಟೆ
  • ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಆ CD ಶಿವು ಕೂತಿದ್ದಾರೆ
  • ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರ ಸಾವಿನ ಬಗ್ಗೆ HDK ಮಾತು

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಧ್ಯೆ ಮಹಾಯುದ್ಧ ನಡೆಯುತ್ತಿದೆ. ಮೊಮ್ಮಗನಿಗೆ ಹೆಚ್‌.ಡಿ ದೇವೇಗೌಡರು ಖಡಕ್ ವಾರ್ನಿಂಗ್ ಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿದೇಶಕ್ಕೆ ಕಳುಹಿಸಿದ್ದು ಅವರೇ ಈಗ ಎಚ್ಚರಿಕೆ ಕೊಡುವವರೇ ಅವರೇ ಎಂದಿದ್ದರು.

Advertisment

ಸಿಎಂ ಸಿದ್ದರಾಮಯ್ಯ ಅವರ ಈ ಮಾತು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಟೀಕಾಸ್ತ್ರ ಪ್ರಯೋಗಿಸಿರುವ ಹೆಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಅಂದು ಸಿದ್ದು ಮರ್ಯಾದೆ ಉಳಿಸಿದ್ದು ಮೋದಿ’- ರಾಕೇಶ್​ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ HDK 

ಸಿದ್ದು ವಕೀಲಿಕೆಗೆ ಹೆಚ್‌ಡಿಕೆ ಸವಾಲು!
ಸಿದ್ದರಾಮಯ್ಯನವರೇ ನಾನು ವಕೀಲನಾಗಿದ್ದೆ. ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇ ಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಶ ಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.

Advertisment

publive-image

ಅತ್ಯಾಚಾರದ ವಿಡಿಯೋ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ ಎನ್ನುವ ಅಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಅಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ.

publive-image

CD ಶಿವು ಪಕ್ಕದಲ್ಲೇ ಇದ್ದಾರೆ!
ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿ ಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ.

Advertisment

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೇಗೌಡ, ಬ್ರೋಕರ್ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ?

publive-image

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ 'ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು' ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ?

ದೇವೇಗೌಡರ ಎಚ್ಚರಿಕೆಗೆ ವ್ಯಂಗ್ಯ!
ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ ನೀವು ಹೇಳಿದ್ದೇನು? ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

Advertisment

ಇದನ್ನೂ ಓದಿ:ಪರಾರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಶಾಕಿಂಗ್ ನ್ಯೂಸ್‌.. ಈ ವಾರದ ಒಳಗೆ ಪಾಸ್‌ಪೋರ್ಟ್‌ ರದ್ದು? 

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ.

publive-image

CD ಶಿವು ಆದೇಶದ ಮೇರೆಗೆ ಪೆನ್‌ಡ್ರೈವ್ ಹಂಚಿಕೆ!
ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. SIT ತನಿಖೆ ಅಂತೀರಾ? SIT ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್ ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್ ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ?

Advertisment


">May 24, 2024

ಕೊನೆಯದಾಗಿ ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಹೆಚ್‌.ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment