Advertisment

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ನಾನು ಸಮರ್ಥಿಸುವುದಿಲ್ಲ; ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದೇನು?

author-image
Gopal Kulkarni
Updated On
ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ನಾನು ಸಮರ್ಥಿಸುವುದಿಲ್ಲ; ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದೇನು?
Advertisment
  • ಸಿ.ಟಿ.ರವಿ ಮೇಲೆ ಹಲ್ಲೆಗೆ ಹೆಚ್​.ಡಿ.ಕುಮಾರಸ್ವಾಮಿ ಆಕ್ರೋಶ!
  • ಅಶ್ಲೀಲ ಪದ ಬಳಸಿದ್ದರೆ ನಾನು ಅದನ್ನು ಸಮರ್ಥಿಸುವುದಿಲ್ಲ
  • ರೌಡಿಗಳನ್ನ ಒಳಗೆ ಹೋಗಲು ಬಿಟ್ಟಿದ್ದು ಯಾರು ಎಂದು ಪ್ರಶ್ನೆ

ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಮಾಧ್ಯಮಗಳ ಎದುರು ಹೇಳಿಕೆ ನೀಡಿರುವ ಹೆಚ್​.ಡಿ.ಕುಮಾರಸ್ವಾಮಿ, ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ನಾನು ಅದನ್ನು ಸಮರ್ಥಿಸುವುದಿಲ್ಲ. ಇದಕ್ಕೆ ಪರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದು ಗುಡುಗಿದ್ದಾರೆ.

Advertisment

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಜಾಮೀನು ವಿಚಾರಣೆ ಏನಾಯ್ತು? ಬೇಲ್ ಅರ್ಜಿ ರಿಜೆಕ್ಟ್​ ಆದ್ರೆ ಮುಂದೇನು..?

publive-image

ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು.

Advertisment

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ನನ್ನ ತಲೆಗೆ ಪೊಲೀಸರು ಹೊಡೆದ್ರು- ಕೋರ್ಟ್​ನಲ್ಲಿ ಆಘಾತಕಾರಿ ವಿಚಾರ ತಿಳಿಸಿದ ಸಿಟಿ ರವಿ

publive-image

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.
ಪೊಲೀಸರೇ,

Advertisment

ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಅವರು ಗುಡುಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment