newsfirstkannada.com

BREAKING: ಹೆಚ್‌.ಡಿ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್‌ನಿಂದ ದಿಢೀರ್ ಬುಲಾವ್‌; ಕಾರಣವೇನು?

Share :

Published February 21, 2024 at 3:36pm

  ಜೆ.ಪಿ.ನಡ್ಡಾ, ಅಮಿಶ್ ಶಾ ಜೊತೆ ಚರ್ಚೆಗೆ HDK ದೆಹಲಿಗೆ ಪ್ರಯಾಣ

  ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಗೆಲ್ತಾರಾ?

  ಬಗೆಹರಿಯದ ಹಾಸನ, ಮಂಡ್ಯ ಲೋಕಸಭಾ ಚುನಾವಣೆ ಗೊಂದಲ

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಜೊತೆಗೆ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿಶ್ ಶಾ ಜೊತೆಗೆ ಚರ್ಚೆ ನಡೆಸುತ್ತಿದ್ದು, ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಇದೇ ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕಣದಲ್ಲಿದ್ದು, ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದೆ. 4 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಐವರು ಅಭ್ಯರ್ಥಿಗಳು ಅಖಾಡದಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಪಕ್ಷೇತರರು ಹಾಗೂ ಕಾಂಗ್ರೆಸ್ ಶಾಸಕರ ಮತದ ಅಗತ್ಯವಿದೆ. ಹೀಗಾಗಿ ರಾಜ್ಯಸಭಾ ಚುನಾವಣೆಯಲ್ಲಿರುವ ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಕುರಿತು ಚರ್ಚೆ ನಡೆಸಲು ಹೆಚ್‌ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ: VIDEO: ಡಿಕೆ ಬ್ರದರ್ಸ್​​ಗೆ ಬಿಜೆಪಿ ಆಫರ್​ ಕೊಟ್ಟಿತ್ತಾ? ನ್ಯೂಸ್ ಫಸ್ಟ್ ಸಂದರ್ಶನದಲ್ಲಿ ಡಿ.ಕೆ ಸುರೇಶ್ ಹೇಳಿದ್ದೇನು?

ರಾಜ್ಯಸಭಾ ಚುನಾವಣೆಯ ಜೊತೆಗೆ ಲೋಕಸಭಾ ಚುನಾವಣೆಯ ಬಗ್ಗೆಯೂ ಕುಮಾರಸ್ವಾಮಿ ಜೊತೆ ಬಿಜೆಪಿ ಹೈಕಮಾಂಡ್ ನಾಯಕರು ಚರ್ಚೆ ನಡೆಸಲಿದ್ದಾರೆ. ಪ್ರಮುಖವಾಗಿ ಹಾಸನ, ಮಂಡ್ಯ ಲೋಕಸಭಾ ಚುನಾವಣೆಯ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಅಸಮಾಧಾನ ವ್ಯಕ್ತವಾಗಿದೆ. ದೆಹಲಿಯಲ್ಲಿ ಹಾಸನ, ಮಂಡ್ಯ ಟಿಕೆಟ್ ಗೊಂದಲದ ಬಗ್ಗೆಯೂ ಬಿಜೆಪಿ ನಾಯಕರ ಜೊತೆ ಹೆಚ್‌ಡಿಕೆ ಚರ್ಚೆ ನಡೆಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಹೆಚ್‌.ಡಿ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್‌ನಿಂದ ದಿಢೀರ್ ಬುಲಾವ್‌; ಕಾರಣವೇನು?

https://newsfirstlive.com/wp-content/uploads/2024/01/H-D-Kumaraswamy.jpg

Load More