/newsfirstlive-kannada/media/post_attachments/wp-content/uploads/2024/06/HD-Kumaraswamy-7.jpg)
ನವದೆಹಲಿ: ಮಂಡ್ಯ ಸಂಸದ ಹೆಚ್.ಡಿ ಕುಮಾರಸ್ವಾಮಿ ಅವರು ನೂತನ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರಕ್ಕೆ ಸೇರ್ಪಡೆಯಾದರು.
/newsfirstlive-kannada/media/post_attachments/wp-content/uploads/2024/06/HD-Kumaraswamy-5.jpg)
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯ ಜಯದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ಲಭಿಸಿದೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮೋದಿ ಸಂಪುಟದಲ್ಲಿ ಸೇರ್ಪಡೆಯಾಗಿದ್ದು, ಪ್ರಭಾವಿ ಖಾತೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕೃಷಿ ಖಾತೆ ಮೇಲೆ ಬಹಳಷ್ಟು ಆಸೆ ಇಟ್ಟುಕೊಂಡಿರುವ ಕುಮಾರಸ್ವಾಮಿ ಅವರು ಬಹಿರಂಗವಾಗಿ ತನ್ನ ಮಹದಾಸೆ ವ್ಯಕ್ತಪಡಿಸಿದ್ದರು. ಸದ್ಯ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್ ಖಾತೆ ನೀಡಲಾಗುತ್ತಿದ್ದು, ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆಯೊಳಗೆ ಅಧಿಕೃತವಾಗಿ ಪ್ರಕಟವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us