/newsfirstlive-kannada/media/post_attachments/wp-content/uploads/2024/06/HD-KUMARASWAMY-6.jpg)
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕುಮಾರಸ್ವಾಮಿಗೆ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕುಮಾರಸ್ವಾಮಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಳಿಕ ಎಕ್ಸ್ ಖಾತೆಯಲ್ಲಿ ಖುಸಿ ವ್ಯಕ್ತಪಡಿಸಿರುವ ಕುಮಾರಸ್ವಾಮಿ.. 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.
ಇದನ್ನೂ ಓದಿ:ರಕ್ತ ಚರಿತ್ರೆಯ ಪಟ್ಟಣಗೆರೆ ಶೆಡ್ನಲ್ಲಿ ಮತ್ತೊಂದು ಅನುಮಾನ.. RTO ಅಸ್ತ್ರ ಪ್ರಯೋಗಿಸಿದ ಪೊಲೀಸರು..!
ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.
ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ… pic.twitter.com/uH4sDqutDM— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2024
ಇದನ್ನೂ ಓದಿ:ಆಸ್ಟ್ರೇಲಿಯಾಗೆ ಭಾರತದ ಈ ಆಟಗಾರರು ಎಂದರೆ ಭಯ.. ರೋಹಿತ್, ಕೊಹ್ಲಿ, ಬೂಮ್ರಾ, ಪಂತ್ ಅಲ್ಲವೇ ಅಲ್ಲ..!
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಮೋದಿ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಇದನ್ನೂ ಓದಿ:ಭಾರತದ ವಿರುದ್ಧ ಸೋತರೂ ಆಸ್ಟ್ರೇಲಿಯಾಗೆ ಸೆಮಿ ಫೈನಲ್ಗೆ ಹೋಗಲು ಇದೆ ಅವಕಾಶ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ