newsfirstkannada.com

ಕಲ್ಲು ಒಡೆಯೋರನ್ನ MP ಮಾಡಿದ್ರೆ ಇನ್ನೇನಾಗುತ್ತೆ?- ಡಿಕೆ ಬ್ರದರ್‌ಗೆ ಹೆಚ್‌.ಡಿ ಕುಮಾರಸ್ವಾಮಿ ಟಾಂಗ್‌

Share :

Published February 2, 2024 at 3:57pm

  ಕರ್ನಾಟಕದಲ್ಲಿ ಬಿರಿಯಾನಿ ತಿಂದು ಭಾರತ್ ಜೋಡೋ ಮಾಡಿದ್ರು

  ಬಡ ಜನರನ್ನ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ

  ಕಲ್ಲು ಹೊಡೆಯೋರನ್ನ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ?

ರಾಮನಗರ: ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಡಿ.ಕೆ. ಸುರೇಶ್ ಅವರು ದೇಶ ವಿಭಜನೆಯ ಬಗ್ಗೆ ಮಾತಾಡಿದ್ದಾರೆ. ಇದು ಅಪ್ರಬುದ್ಧ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ರು. ಈಗ ವಿಭಜನೆ ಮಾತನಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. 174 ಕೋಟಿ ರೂಪಾಯಿ ದೇಶದ ಮೊದಲನೇ ಬಜೆಟ್. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಫೈನಾನ್ಸ್ ಕಮಿಷನ್‌ಗಳನ್ನ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಅನ್ನೋ ವರದಿ ಕೊಡ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ. ಈ ಹಂಚಿಕೆಯನ್ನ ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು‌. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: ಕೇಸರಿ ಶಾಲು ಹಾಕಿದ್ದ ಕುಮಾರಸ್ವಾಮಿ ವಿರುದ್ಧ ದೇವೇಗೌಡ್ರ ಆಕ್ರೋಶ; ಈ ಬಗ್ಗೆ ಏನಂದ್ರು..?

ಮಾತು ಮುಂದುವರಿಸಿದ ಕುಮಾರಸ್ವಾಮಿ ಅವರು ಇಲ್ಲಿ ಕಲ್ಲು ಹೊಡೆಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರನ್ನ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಲ್ಲು ಒಡೆಯೋರನ್ನ MP ಮಾಡಿದ್ರೆ ಇನ್ನೇನಾಗುತ್ತೆ?- ಡಿಕೆ ಬ್ರದರ್‌ಗೆ ಹೆಚ್‌.ಡಿ ಕುಮಾರಸ್ವಾಮಿ ಟಾಂಗ್‌

https://newsfirstlive.com/wp-content/uploads/2024/01/HDK_JDS.jpg

Load More