VIDEO: ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ HDK ಖಡಕ್ ರಿಯಾಕ್ಷನ್; ಹೇಳಿದ್ದೇನು?

author-image
admin
Updated On
ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆ ಬೆಂಗಳೂರು ಬಿಟ್ಟ HD ಕುಮಾರಸ್ವಾಮಿ.. ಕಾರಣವೇನು?
Advertisment
  • ನಾವಂತೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ
  • ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಅವರಿಗೆ ಶಿಕ್ಷೆಯಾಗಲಿ
  • ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರಾ?

ಬೆಂಗಳೂರು: ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಖಡಕ್ ರಿಯಾಕ್ಷನ್ ನೀಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದಿದ್ದಾರೆ.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ನೀಡಿ ಮಹತ್ವದ ಆದೇಶ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಹೆಚ್‌.ಡಿ ಕುಮಾರಸ್ವಾಮಿ ಅವರು ನಾನಾಗಲಿ ದೇವೇಗೌಡ್ರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದರು.

ಇನ್ನು, ಚುನಾವಣೆ ಸಂದರ್ಭದಲ್ಲಿ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌.. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರಾ?
ಇದೇ ವೇಳೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಶ್ನೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅದು ನನಗೆ ಸಂಬಂಧ ಪಟ್ಟಿಲ್ಲ. ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ವಿದೇಶಕ್ಕೆ ಹೋಗಿದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು. ಅವರು ಕರೆದುಕೊಂಡು ಬರ್ತಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೆಚ್‌.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment