Advertisment

ಮಂಡ್ಯದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಕಾಂಗ್ರೆಸ್ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ

author-image
admin
Updated On
ಮಂಡ್ಯದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಕಾಂಗ್ರೆಸ್ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ
Advertisment
  • ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಹೆಚ್‌.ಡಿ ಕುಮಾರಸ್ವಾಮಿ
  • ಯಡಿಯೂರಪ್ಪ, ಯದುವೀರ್, ಗೋವಾ ಸಿಎಂ ಪ್ರಮೋದ್ ಸಾವಂತ್‌ ಸಾಥ್‌
  • ಮಂಡ್ಯಕ್ಕೆ ತೆರಳುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಜೊತೆಗೆ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು.

Advertisment

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹೆಚ್‌.ಡಿ ಕುಮಾರಸ್ವಾಮಿ ಅವರು ಇಂದು ಮೂರು ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್‌, ಯದುವೀರ್, ಸಿ.ಎಸ್ ಪುಟ್ಟರಾಜು ಜೊತೆ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಸುರೇಶ್‌ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಜೊತೆ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಮೂರನೇ ಬಾರಿ ನಿಖಿಲ್ ಕುಮಾರಸ್ವಾಮಿ, ಶಾಸಕ‌ ಹೆಚ್.ಟಿ ಮಂಜು, ಮಾಜಿ ಸಚಿವ ಸಾ.ರಾ ಮಹೇಶ್, ಜೆಡಿಎಸ್ ಮುಖಂಡ ರಾಮಚಂದ್ರು ಜೊತೆ ನಾಮಿನೇಶನ್ ಸಲ್ಲಿಸಿದ್ದಾರೆ.

publive-image

ನಾಮಪತ್ರ ಸಲ್ಲಿಕೆಗೂ ಮುನ್ನ ಹೆಚ್‌.ಡಿ ಕುಮಾರಸ್ವಾಮಿ ಅವರು ಮಂಡ್ಯದ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪ್ರತಿಮೆಗೆ ಪುಷ್ಪನಮನ ಸಲ್ಲಿಸೋ ಮೂಲಕ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಕಾವೇರಮ್ಮನ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಇದನ್ನೂ ಓದಿ:‘ಸ್ವಾಭಿಮಾನಿ’ ನೆಲದಲ್ಲಿ ದಳಪತಿಗಳ ಆರ್ಭಟ ಜೋರು.. ಇವತ್ತು ಮಂಡ್ಯದಲ್ಲಿ HD ಕುಮಾರಸ್ವಾಮಿ ನಾಮಿನೇಶನ್

Advertisment

ನಾಮಪತ್ರ ಸಲ್ಲಿಸುವ ವೇಳೆ ಮಾತನಾಡಿದ ಹೆಚ್‌.ಡಿ ಕುಮಾರಸ್ವಾಮಿ ಅವರು, ನಮ್ಮನ್ನು ಮುಗಿಸಲು ಕಾಂಗ್ರೆಸ್‌ಗೆ ಸಾಧ್ಯವೇ ಇಲ್ಲ. ಮಂಡ್ಯ ಜನತೆಯೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಬುದ್ಧಿ ಕಲಿಸುತ್ತಾರೆಂದು ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ತಂದೆ-ತಾಯಂದಿರು ನನಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡ್ತಾರೆ. ಜೆಡಿಎಸ್ ನೆಲಕಚ್ಚಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹೆಚ್​ಡಿಕೆ, ಜೆಡಿಎಸ್ ಎಲ್ಲಿ ನೆಲ ಕಚ್ಚಿದೆ? ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರಬಹುದು. ಜೆಡಿಎಸ್ ಅನ್ನು ನೆಲಕಚ್ಚಿಸಲು ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದಾರೆ.

publive-image

ಮಂಡ್ಯಕ್ಕೆ ತೆರಳುವ ಮುನ್ನ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸಕ್ಕೆ ಭೇಟಿ ಕೊಟ್ಟು ತಂದೆಯ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ದೇವೇಗೌಡರ ಆಶೀರ್ವಾದ ಪಡೆದು ನಂತ್ರ ಮಂಡ್ಯಕ್ಕೆ ತೆರಳಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment